ವಿಕಲಚೇತನರಿಗೆ ತ್ರಿಚಕ್ರ ವಾಹನ (ಸ್ಕೂಟರ್) ವಿತರಣೆ: ಅರ್ಜಿ ಆಹ್ವಾನ

0
158

ಕಲಬುರಗಿ: 2012-13 ರಿಂದ 2014-15 ನೇ ಸಾಲಿನ ಶೇ.5 ಎಸ್.ಎಫ್.ಸಿ. ಮತ್ತು ಮಹಾನಗರಪಾಲಿಕೆ ಅನುದಾನದಡಿ ವಿಕಲಚೇತನರಿಗೆ ತ್ರಿಚಕ್ರ ವಾಹನ (ಸ್ಕೂಟರ್) ನೀಡಲು ಅರ್ಹ ವಿಕಲಚೇತನರ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ಹಿಂದೆ ಸ್ವೀಕೃತವಾದ ಅರ್ಜಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಹೊಸ ಅರ್ಜಿಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರು ನಿಗದಿತ ಅರ್ಜಿ ನಮೂನೆಯನ್ನು ಮಹಾನಗರಪಾಲಿಕೆ ಕಾರ್ಯಾಲಯದಲ್ಲಿನ ಕೋಣೆ ಸಂಖ್ಯೆ 47 ರಲ್ಲಿ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2022ರ ಮೇ 5 ರ ಸಂಜೆ 5 ಗಂಟೆಯೊಳಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಕಚೇರಿಯ ಆವಕ ಶಾಖೆಯಲ್ಲಿ ಅರ್ಜಿ ಸಲ್ಲಿಸಬೇಕು.

Contact Your\'s Advertisement; 9902492681

ಕೊನೆಯ ದಿನಾಂಕ ಮುಗಿದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here