ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಮೂಲಕ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಸಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ತಂಡ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ನ್ನು ಶುಕ್ರವಾರ ಅಫಜಲಪುರದ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್ನಲ್ಲಿ ಬಂಧಿಸಲಾಗಿದೆ.
ಇದನ್ನೂ ಒದಿ: ಕಲಬುರಗಿಯಲ್ಲಿ ಆಮ್ ಆದ್ಮಿ ಕಾರ್ಯಕರ್ತರು ಪೊಲೀಸರ ವಶಕ್ಕೆ
ನಿನ್ನೆ ಕಾಂಗ್ರೆಸ್ ಶಾಸಕ ಎಮ್.ವೈ.ಪಾಟೀಲ್ ಗನ್ಮ್ಯಾನ್ ಹಯ್ಯಾಳ ದೇಸಾಯಿಯನ್ನು ಬಂಧಿಸಲಾಗಿತ್ತು. ಗನ್ ಮ್ಯಾನ್ ಬಂಧನದ ನಂತರ ಇದೀಗ ಪಿಎಸ್ಐ ನೇಮಕಾತಿ ಆಕ್ರಮ ಕಾಂಗ್ರೆಸ್ ಮುಖಂಡರ ಕೊರಳಿಗೂ ಬಂದಿದೆ.
ನಾಳೆ ಮಹಾಂತೇಶ್ ಪಾಟೀಲ್ ಹಾಗೂ ಆತನ ಸಹೋದರ ಆರ್.ಡಿ.ಪಾಟೀಲ್ 101 ಸಾಮೂಹಿಕ ವಿವಾಹವನ್ನು ಏರ್ಪಡಿಸಲಾಗಿತ್ತು, ಸಿಐಡಿ ಡಿವೈಎಸ್ಪಿ ಶಂಕರಗೌಡ, ಆರೋಪಿ ಕಾಂಗ್ರೆಸ್ ನಾಯಕ ಮಹಾಂತೇಶ್ ಪಾಟೀಲ್ ಕೊರಳಪಟ್ಟಿ ಹಿಡಿದು ಎಳೆದುಕೊಂಡು ಹೋದರು. ಈ ಸಂದರ್ಭದಲ್ಲಿ ಬೆಂಬಲಿಗರು ತನಿಖಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಕಂಡುಬಂತು.