ಬೆಂಗಳೂರು: ಇಂದು ವಿಧಾನ ಸಭೆಯಲ್ಲಿ ಮೈತ್ರಿ ಸರಕಾರ ಬಹುಮತ ಕಳೆದುಕೊಂಡ ಹಿನ್ನೆಲೆಯಲ್ಲಿ ಬಿ.ಎಸ್.ಪಿ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ರಾಜ್ಯದ ಬಿಎಸ್.ಪಿ ಶಾಸಕ ಮಹೇಶ್ ಅವರಿಗೆ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
कर्नाटक में कुमारस्वामी सरकार के समर्थन में वोट देने के पार्टी हाईकमान के निर्देश का उल्लंघन करके बीएसपी विधायक एन महेश आज विश्वास मत में अनुपस्थित रहे जो अनुशासनहीनता है जिसे पार्टी ने अति गंभीरता से लिया है और इसलिए श्री महेश को तत्काल प्रभाव से पार्टी से निष्कासित कर दिया गया।
— Mayawati (@Mayawati) July 23, 2019
ಮಾಯಾವತಿ ಅವರು ತಮ್ಮ ಟ್ವೀಟ್ ನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ, ಕುಮಾರಸ್ವಾಮಿ ಪರ ಮತ ಚಲಾವಣೆಗೆ ಮಹೇಶ್ ಅವರಿಗೆ ಸೂಚನೆ ನೀಡಿತ್ತು. ಆದರೆ ಅವರು ವಿಧಾನ ಸಭೆ ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ಗೈರು ಹಾಜರಾಗಿದ್ದು, ಹೈಕಮಾಂಡ್ ಅವರ ಆದೇಶ ಉಲ್ಲಂಘನೆ ಮಾಡಿದ್ದಾರೆಂದು ಅವರು ತಿಳಿಸಿ, ಪಕ್ಷ ಮಹೇಶ್ ಅವರ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಿ ತಾತ್ಕಾಲಿಕವಾಗಿ ಅವರಿಗೆ ಪಕ್ಷದಿಂದ ತೆಗೆದುಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.