ಕಲಬುರಗಿ; ಹರ್ಷಾ ಕನ್ಸಟ್ರಕ್ಷನ್ ಅವರು ಬಾಲ ಕಾರ್ಮಿಕರಿಗೆ ದುಡಿಸಿಕೊಳ್ಳುತ್ತಿರುವುದು ಖಂಡನೀಯ ಕಲಬುರಗಿ ಮಹಾನಗರದ ಮಧ್ಯಭಾಗದಲ್ಲಿ ನಿರ್ಮಾಣವಾಗುತ್ತಿರುವ ಜಯದೇವ ಆಸ್ಪತ್ರೆಯ ಕಟ್ಟಡ ಕೆಲಸದಲ್ಲಿ ಬಾಲ ಕಾರ್ಮಿಕರಿಗೆ ದುಡಿಸಿಕೊಳ್ಳುತ್ತಿರುವುದು ಖಂಡನೀಯವಾಗಿದೆ ಮತ್ತು ಕಾರ್ಮಿಕ ನಿಯಮಕ್ಕೆ ವಿರುದ್ಧವಾಗಿದೆ.
ಈ ಬಗ್ಗೆ ಸರಕಾರ ತಕ್ಷಣ ಗಂಭೀರವಗಿ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಶಿಸ್ತಿನ ಕ್ರಮ ಕೈಗೊಳಬೇಕೆಂದು ನವಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಭೀಮರಾಯ ಎಂ.ಕಂದಳ್ಳಿ ಅವರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ ಮುಖ್ಯಾಂಶಗಳು
ಹರ್ಷಾ ಕನ್ಸಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ಇವರ ಗುತ್ತಿಗೆಯ ಅಡಿಯಲ್ಲಿ ನಡೆಯುತ್ತಿರುವ ಜಯದೇವ ಆಸ್ಪತ್ರೆಯ ಕಟ್ಟಡದ ಕೆಲಸದಲ್ಲಿ ಬಾಲ ಕಾರ್ಮಿಕರನ್ನು ಉಪಯೋಗಿಸಿಕೊಳ್ಳುತ್ತಿರುವುದಷ್ಟೇ ಅಲ್ಲದೇ, ಕೆಲಸದ ಸಂದರ್ಭದಲ್ಲಿ ಕಾರ್ಮಿಕರಿಗೆ ಒದಗಿಸಬೇಕಾದ ಸುರಕ್ಷತಾ ಸಾಮಗ್ರಿಗಳು, ಉಪಕರಣಗಳು ನೀಡದೇ ರಾಜಾರೋಷವಾಗಿ ಕಾರ್ಮಿಕ ನಿಯಮಗಳನ್ನು ಉಲ್ಲಂಘಿಸಿ ಕೆಲಸ ನಡೆಸುತ್ತಿದ್ದಾರೆ. ಸದರಿ ಈವಿಷಯದ ಬಗ್ಗೆ ಸರಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಭೀಮರಾಯ ಕಂದಳ್ಳಿ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದೆ.