ಸುರಪುರ: ಎಐಟಿಯುಸಿ ಸಂಯೋಜನೆಯ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಹಾಗೂ ಅಕ್ಷರದಾಸೋಹ ಬಿಸಿಯೂಟ ನೌಕರರ ಸಂಘದ ನೇತೃತ್ವದಲ್ಲಿ ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ೨ನೇ ತಾಲೂಕು ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಭಾಗವಹಿಸಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಇದನ್ನೂ ಓದಿ: ರಂಗಂಪೇಟ : ಹಿಂದುಳಿದ ವರ್ಗಗಳ ಮುಖಂಡರ ಸಭೆ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ರಾಜಾ ಹನುಮಪ್ಪ ನಾಯಕ (ತಾತಾ) ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಲುಬುರ್ಗಿ ಯಾದಗಿರಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ:ಸುರೇಶ ಸಜ್ಜನ್,ಮುಖಂಡ ಶಂಕರ ನಾಯಕ,ನಗರಸಭೆ ಮಹೇಶ ಪಾಟೀಲ್, ಸದಸ್ಯ ನರಸಿಂಹಕಾಂತ ಪಂಚಮಗಿರಿ,ವೆಂಕಟೇಶ ಹೊಸ್ಮನಿ,ರಮೇಶದೊರೆ ಆಲ್ದಾಳ,ವೆಂಕಟೇಶ ಬೇಟೆಗಾರ, ಹೋರಾಟಗಾರರಾದ ಮಲ್ಲಿಕಾರ್ಜುನ ಕ್ರಾಂತಿ,ಅಯ್ಯಣ್ಣ ಹಾಲಬಾವಿ,ವೆಂಕಟೇಶ ನಾಯಕ ಬೈರಿಮಡ್ಡಿ, ಶ್ರೀನಿವಾಸ ನಾಯಕ ದರಬಾರಿ,ರಂಗನಗೌಡ ಪಾಟೀಲ್ ದೇವಿಕೇರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ದೇವಿಂದ್ರಪ್ಪ ಪತ್ತಾರ,ದೇವಿಂದ್ರಪ್ಪ ನಗರಗುಂಡ,ಮಲ್ಲಯ್ಯ ವಗ್ಗಾ,ತಿಮ್ಮಯ್ಯ ತಳವಾರ,ರಾಮಯ್ಯ ಗುತ್ತೇದಾರ ಸೇರಿದಂತೆ ಅಕ್ಷರದಾಸೋಹ ಬಿಸಿಯೂಟ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಸೇರಿದಂತೆ ಅನೇಕರಿದ್ದರು.