ರೇವೂರ, ಬಿಜಿ ಪಾಟೀಲರಿಗೆ ಮಂತ್ರಿ ಸ್ಥಾನ ನೀಡಲು ಸಿರಗಾಪೂರ ಒತ್ತಾಯ

0
29

ಕಲಬುರಗಿ: ಶೀಘ್ರದಲ್ಲೇ ನಡೆಯಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಭಾಗೀಯ ಕೇಂದ್ರ ಕಲಬುರಗಿ ಜಿಲ್ಲೆಗೆ ಎರಡು ಮಂತ್ರಿ ಸ್ಥಾನ ನೀಡಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಒತ್ತಾಯಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಎರಡು ಬಾರಿ ಸಚಿವ ಸಂಪುಟ ವಿಸ್ತರಣೆಯಾದರೂ ಜಿಲ್ಲೆಗೆ ಒಂದು ಸ್ಥಾನವನ್ನು ನೀಡದೆ ಅನ್ಯಾಯ ಮಾಡಲಾಗಿದೆ.ಜಿಲ್ಲೆಯಿಂದ ಐವರು ಶಾಸಕರು ಇದ್ದರೂ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.ಶಾಸಕ ಹಾಗೂ ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.ಅಲ್ಲದೆ ಜಿಲ್ಲೆಯ ಇನ್ನೋರ್ವ ಪ್ರಭಾವಿ ಬಿಜೆಪಿ ಮುಖಂಡ ಬಿ.ಜಿ.ಪಾಟೀಲ ಅವರು ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.ಆದ್ದರಿಂದ ಇವರಿಬ್ಬರಿಗೂ ಈಗಲಾದರೂ ಸಚಿವ ಸ್ಥಾನ ನೀಡಬೇಕು.ಕಲಬುರಗಿ ಜಿಲ್ಲೆಯಲ್ಲಿ ಭಾರತಿಯ ಜನತಾ ಪಕ್ಷ ಬೇರುರಿದೆ.ಮಂತ್ರಿ ಸ್ಥಾನ ನೀಡಿ ನ್ಯಾಯ ಒದಗಿಸಲು ಮುಂದಾಗಬೇಕು.

Contact Your\'s Advertisement; 9902492681

ಇದನ್ನೂ ಓದಿ: ರೈತ ಸಶಕ್ತನಾದರೆ – ದೇಶ ಸಶಕ್ತವಾದಂತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಈ ಹಿಂದೆ ಎಸ್.ಎಂ.ಕೃಷ್ಣ ಸಚಿವ ಸಂಪುಟದಲ್ಲಿ ಜಿಲ್ಲೆಯಿಂದ ಸರ್ಕಾರದಲ್ಲಿ ಆರು ಜನ ಸಚಿವರಿದ್ದರು.ಪ್ರಮುಖ ಖಾತೆಗಳನ್ನು ನೀಡಲಾಗಿತ್ತು.ವಿರೇಂದ್ರ ಪಾಟೀಲ್ ಮತ್ತು ಎನ್.ಧರಂಸಿಂಗ ಅವರು ಮುಖ್ಯಮಂತ್ರಿಯಾಗಿದ್ದರು.ಇನ್ನು ಅನೇಕ ರಾಜಕೀಯ ನಾಯಕರು ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದ್ದಾರೆ.ಆದರೆ ಬಿಜೆಪಿ ಸರ್ಕಾರದಲ್ಲಿ ಜಿಲ್ಲೆಗೆ ಒಂದೂ ಸಚಿವ ಸ್ಥಾನ ನೀಡದೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ.ಕೂಡಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಹಾಗೂ ಬಿ.ಜಿ.ಪಾಟೀಲರಿಗೆ ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಳ್ಳಬೇಕು.ಇಲ್ಲದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಜನರು ಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here