ಕೆರೆ ಕೋಡಿ ನುಂಗಿದವರನ್ನು ಖಾಲಿ ಮಾಡಿಸುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ

1
13
  • ಬೆಂಗಳೂರಿನಲ್ಲಿ ಜನತಾ ಜಲಧಾರೆ ಕಾರ್ಯಕ್ರಮ
  • ಸಚಿವ ಗೋಪಾಲಯ್ಯ ಮೇಲೆ ತೀವ್ರ ವಾಗ್ದಾಳಿ; ಟಿಕೆಟ್‌ ಪಡೆದು ಟೋಪಿ ಹಾಕಿದ ಎಂದ ಟೀಕೆ
  • ಟೀಂ ಎಸ್ʼಬಿಎಂ ವಿರುದ್ಧವೂ ಟೀಕಾಪ್ರಹಾರ

ಬೆಂಗಳೂರು: ಬಿಜೆಪಿ ನಾಯಕರಿಗೆ ದೊಡ್ಡ ಹುಲ್ಲುಗಾವಲು ಸಿಕ್ಕಿದೆ. ಚೆನ್ನಾಗಿ ಮೇಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ರಾಜ್ಯ ಸರಕಾರದ ವಿರುದ್ಧ ಗುಡುಗಿದರು.

ಅಲ್ಲದೆ, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕೆರೆ-ಕೋಡಿಗಳನ್ನು ನುಂಗಿದವರನ್ನು ಖಾಲಿ ಮಾಡಿಸುತ್ತೇವೆ ಹಾಗೂ ಆ ಕೆರೆಗಳಿಗೆ ಪೂರ್ವ ವೈಭವ ತಂದು ನದಿ ಜಲವನ್ನು ತುಂಬಿಸುತ್ತೇವೆ ಎಂದು ಘೋಷಣೆ ಮಾಡಿದರು. ನಗರದ ಮಹಾಲಕ್ಷ್ಮೀ ಲೇಔಟ್ ನಲ್ಲಿ ಇಂದು ಜನತಾ ಜಲದಾರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

Contact Your\'s Advertisement; 9902492681

ಇದನ್ನೂ ಓದಿ: ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಎಸ್‌ಯುಸಿಐ ಪ್ರತಿಭಟನೆ

ನಾನು ೨೫ ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡದೇ ಇದ್ದಿದ್ದರೆ ಎಂಟು ಸಾವಿರ ಕೋಟಿ ರೂ. ಕಮಿಷನ್ ಸಿಗುತ್ತಿತ್ತು. ನಾನು ಬೆಂಗಳೂರಿನಲ್ಲಿ ಚರಂಡಿ ಕ್ಲೀನ್ ಮಾಡುವುದಕ್ಕೆ, ವೈಟ್ ಟ್ಯಾಪಿಂಗ್ ಮಾಡುವುದಕ್ಕೆ ಅದೇ ಹಣವನ್ನು ಕೊಟ್ಟು ಕಮಿಷನ್ ಪಡೆದಿದ್ದರೆ ಬಿಜೆಪಿ, ಕಾಂಗ್ರೆಸ್ ಗಿಂತ ಚೆನ್ನಾಗಿ ಚುನಾವಣೆ ಮಾಡಬಹುದಿತ್ತು. ನಮ್ಮ ಶಾಸಕರಿಗೆ ಆ ಹಣವನ್ನು ಹಂಚಿ ಕೊಳ್ಳೆ ಹೊಡೆಯಬಹುದಿತ್ತು. ಈಗ ಬಿಜೆಪಿಯವರು ೪೦% ಕಮಿಷನ್ ಹೊಡೆಯುತ್ತಿದ್ದಾರೆ, ಅವರಿಗೆ ನಾಚಿಕೆ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸಚಿವ ಗೋಪಾಲಯ್ಯ ವಿರುದ್ಧ ಟೀಕಾಪ್ರಹಾರ: ಈ ಕ್ಷೇತ್ರದಲ್ಲಿ ಒಬ್ಬ ಮಹಾನುಭಾವ ಇದ್ದ. ಆತನಿಗೆ ಎರಡು ಬಾರಿ ಟಿಕೆಟ್ ಕೊಟ್ಟೆ. ನನಗೆ ಟೋಪಿ ಹಾಕಿ ಹೋದ. ಸ್ವಾಮೀಜಿ ಒಬ್ಬರು, “ಅಂತ ಏನೋ ತಪ್ಪು ಮಾಡಿಕೊಂಡಿದ್ದಾನೆ, ಒಂದು ಬಾರಿ ಟಿಕೇಟ್ ಕೊಡಿ” ಎಂದರು. ಅವರ ಸಲಹೆ ಮೇರೆಗೆ ಟಿಕೆಟ್ ಕೊಟ್ಟೆ. ಆಮೇಲೆ ಸಾವಿರಾರು ಕೋಟಿ ರೂ. ಅನುದಾನ ಕೊಟ್ಟೆ ಈ ಕ್ಷೇತ್ರಕ್ಕೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಅವರ ಹೆಸರು ಹೇಳದೆಯೇ ಟೀಕಾಪ್ರಪಾರ ನಡೆಸಿದರು ಕುಮಾರಸ್ವಾಮಿ ಅವರು.

ಅಬಕಾರಿ ಇಲಾಖೆಯಲ್ಲಿ ಟಾರ್ಗೆಟ್ ಹಾಕಿಕೊಂಡು ಲೂಟಿ ಮಾಡಲಾಗುತ್ತಿದೆ. ವೈನ್ ಸ್ಟೋರ್ʼಗಳಿಂದ ವಸೂಲಿ ಮಾಡಲಾಗುತ್ತಿದೆ. ಪಾಪದ ಹಣವನ್ನು ಲೂಟಿ ಮಾಡಿ ಮೆರೆಯುತ್ತಿದ್ದಾರೆ. ಅದೇ ಹಣವನ್ನು ಮುಂದಿನ ಚುನಾವಣೆಯಲ್ಲಿ ಮತದಾರರಿಗೆ ಹಂಚುತ್ತಾರೆ ಎಂದು ಅವರು ದೂರಿದರು. ಬೆಂಗಳೂರು ನಗರದ ಮೂವರು ಶಾಸಕರು ಪ್ರತಿ ಬಾರಿಯೂ ಬಿಡಿಎ ಸಭೆಗೆ ಹೋದರೆ ಮೂಟೆಗಳಲ್ಲಿ ಹಣ ತುಂಬಿಕೊಂಡು ಹೋಗುತ್ತಿದ್ದರಂತೆ. ಆರ್.ಆರ್.ನಗರದವರು, ಯಶವಂತಪುರದವರು ಮತ್ತು ಕೆ.ಆರ್.ಪುರಂ ನವರು ಎಲ್ಲಾ ಸಭೆಗಳಲ್ಲೂ ಭರ್ಜರಿ ಹಣ ಮಾಡಿಕೊಳ್ಳುತ್ತಿದ್ದರು. ಸಿದ್ದರಾಮಯ್ಯ ಕಾಲದಲ್ಲಿ ಬಿಡಿಎ ಮೀಟಿಂಗ್ʼಗಳಲ್ಲಿ 9 ಕೋಟಿ ಎತ್ತಿಕೊಂಡು ಹೋಗಿದ್ದರಂತೆ. ಆ ಮಾತನ್ನು ಅಧಿಕಾರಿಗಳೇ ಹೇಳುತ್ತಾರೆ ಎಂದು ಪರೋಕ್ಷವಾಗಿ ಎಸ್ʼಬಿಎಂ ಟೀಂ ವಿರುದ್ಧ ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಇದನ್ನೂ ಓದಿ: ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಶಿವಾನಂದ ತಗಡೂರುಗೆ ಸನ್ಮಾನ

ರಾಜ್ಯದ ನೀರಾವರಿ ಯೋಜನೆಗಳನ್ನು ಬದ್ಧತೆಯಿಂದ ಜಾರಿ ಮಾಡುವುದು ನಮ್ಮ ಗುರಿ. ನೆನೆಗುದಿಗೆ ಬಿದ್ದಿರುವ ಎಲ್ಲ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ. ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ದೊಡ್ಡ ಕೊಡುಗೆ ನೀಡಿದ್ದಾರೆ. ಮೆಟ್ರೋ ರೈಲು, ಐಟಿಗೆ ಉತ್ತೇಜನ, ೯ ಟಿಎಂಸಿ ಕುಡಿಯುವ ನೀರು ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟರು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕೆರೆ ನುಂಗಿದವರನ್ನು ಖಾಲಿ ಮಾಡಿಸುತ್ತೇನೆ: ಬೆಂಗಳೂರಿನಲ್ಲಿ ಶಿಕ್ಷಣ ದುಬಾರಿಯಾಗಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ʼಕೆಜಿಯಿಂದ ೧೨ನೇ ತರಗತಿಯ ವರೆಗೂ ಉಚಿತ ಶಿಕ್ಷಣ ಕೊಡುತ್ತೇನೆ. ಜತೆಗೆ, ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತುಕೊಟ್ಟು, ಜಲಮೂಲಗಳನ್ನು ರಕ್ಷಣೆ ಮಾಡುತ್ತೇವೆ. ಕೆರೆ ನುಂಗಿರುವವರನ್ನು ಕೆರೆ ಕೋಡಿಗಳನ್ನು ನುಂಗಿದವರನ್ನು ಖಾಲಿ ಮಾಡಿಸುತ್ತೇನೆ. ಯಾರ ಮನೆ ಬಾಗಲಿಗೂ ನನ್ನನ್ನೂ ಕಳಿಸಬೇಡಿ, ನನ್ನ ಮನೆ ಬಾಗಿಲಿಗೂ ಯಾರು ಬರುವುದಕ್ಕೆ ಬಿಡಬೇಡಿ. ಸ್ವತಂತ್ರ ಸರಕಾರ ನೀಡಿ. ಇದು ನನ್ನ ಕೊನೆ ಹೋರಾಟ, ಒಂದೇಒಂದು ಅವಕಾಶ ಕೊಡಿ ಎಂದು ಅವರು ಮನವಿ ಮಾಡಿದರು.

ಜೇವರ್ಗಿ ವಾರ್ಡ್ ಉಪ ಚುನಾವಣೆ: ಆಮ್ ಆದ್ಮಿ ಪಕ್ಷದಿಂದ ಅಜೀಜಾ ಬೇಗಂ ನಾಮಪತ್ರ ಸಲ್ಲಿಕೆ

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿ; ಬಿಜೆಪಿ ಬಿಬಿಎಂಪಿ ಚುನಾವಣೆ ಮಾಡಲ್ಲ. ಅವರಿಗೆ ಅಷ್ಟು ಧೈರ್ಯ ಇಲ್ಲ. ನ್ಯಾಯಾಲಯ ಆದೇಶ ಮಾಡಿದೆ. ಆದರೂ ಅವರು ಕೋರ್ಟ್ ಆದೇಶವನ್ನು ಪಾಲಿಸುತ್ತಾರೆ ಎಂಬ ನಂಬಿಕೆ ಇಲ್ಲ ಎಂದರು.

ಮಹಾಲಕ್ಷ್ಮೀ ಬಡಾವಣೆಯಲ್ಲಿ ಈ ಬಾರಿ ಗೋಪಾಲಯ್ಯ ಬಾರಿ ದೊಡ್ಡ ಫೈಟ್ ಇದೆ. ನಮ್ಮ ಪಕ್ಷದ ಬಲವಾದ ಪೈಪೋಟಿ ಕೊಡುತ್ತದೆ. ಮುಂಬಯಿಗೆ ಹೋಗಿದ್ದರು ಅವರು, ನಂತರ ಕ್ಯಾಸೆಟ್ ತೋರಿಸಬೇಡಿ ಎಂದರು ಎಂದು ಲೇವಡಿ ಮಾಡಿದರು. ಕಾರ್ಯಕ್ರಮದಲ್ಲಿ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಶೆಂಪೂರ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಸದಸ್ಯ ಟಿ.ಎ.ಶರವಣ, ಪಕ್ಷದ ಹಿರಿಯ ಮುಖಂಡ ರಾಜಣ್ಣ, ಪಕ್ಷದ ನಗರದ ಘಟಕದ ಅಧ್ಯಕ್ಷ ಪ್ರಕಾಶ ಮುಂತಾದವರು ವೇದಿಕೆಯಲ್ಲಿದ್ದರು.

ರೆಹಮಾನ್ ಪಟೇಲ್ ಗೆ ಹೈದ್ರಾಬಾದ್ ಆರ್ಟ್ ಸೂಸೈಟಿ ರಾಷ್ಟ್ರೀಯ ಪ್ರಶಸ್ತಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here