ಜಿಮ್ಸ್ ನಲ್ಲಿ ರೋಗಿಗಳಿಗೆ ಭೇಟಿ ಮಾಡಿದ ಸಂಸದ ಡಾ.ಉಮೇಶ ಜಾಧವ

0
63
  • ಚಿತ್ತಾಪುರ ತಾಲೂಕಿನಲ್ಲಿ ವಾಂತಿ ಭೇದಿ

ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದಲ್ಲಿ ಬುಧವಾರದಂದು ಕಲುಷಿತ ನೀರು ಸೇವಿಸಿ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳನ್ನು ಲೋಕಸಭಾ ಸದ್ಯಸ ಡಾ.ಉಮೇಶ ಜಾಧವ ಅವರು ಗುರುವಾರ ಭೇಟಿ ಮಾಡಿ, ಆರೋಗ್ಯವನ್ನು ವಿಚಾರಿಸಿದರು.

ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ ಅವರ ಜೊತೆ ಚರ್ಚಿಸಿ ವಾಂತಿ-ಭೇದಿಯಿಂದ ಬಳಲುತ್ತಿರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕೆಂದು ಸೂಚಿಸಿದರು.

Contact Your\'s Advertisement; 9902492681

ಇದನ್ನೂ ಓದಿ: ನಾಳೆ ಜೆಡಿಎಸ್ ನಿಂದ ಚುನಾವಣೆ ರಣಕಹಳೆ: ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ನಂತರ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರನ್ನು ಭೇಟಿ ಮಾಡಿದ ಸಂಸದರು ಗ್ರಾಮದಲ್ಲಿ ಕಲುಷಿತ ನೀರಿನ ಕುರಿತು ಸಮಸ್ಯೆಯನ್ನು ಪರಿಶೀಲನೆ ಮಾಡಿ, ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು.

ಚಿತ್ತಾಪೂರ ತಾಲ್ಲೂಕಿನಲ್ಲಿ 75 ವಾಂತಿ-ಭೇದಿ ರೋಗಿಗಳಿದ್ದು, ಅದರಲ್ಲಿ ಒಬ್ಬ ರೋಗಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ 74 ರೋಗಿಗಳನ್ನು ಚಿತ್ತಾಪುರ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರ ಆರೋಗ್ಯಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ತಾಲ್ಲೂಕಿನ ಆರೋಗ್ಯ ಅಧಿಕಾರಿಗಳಿಗೆ ಸೂಚಿಸುವಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ: ಆಳಂದ: ಕರ್ತವ್ಯ ಲೋಪ ಮೂವರು ಶಿಕ್ಷಕರ ಅಮಾನತು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರ ಡಾ.ಗಿರೀಶ್ ಬದೋಲೆ, ಮೆಡಿಕಲ್ ಅಧೀಕ್ಷಕ ಡಾ.ಎಸ್.ಎಸ್.ಶಫಿಯುದ್ದೀನ್, ಕಾಲರಾ ನಿಯಂತ್ರಣ ಅಧಿಕಾರಿ ಡಾ.ಚಂದ್ರಕಾಂತ್ ನರಿಬೋಳ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here