ಕಾಪು: ಗ್ಯಾನ್ ವ್ಯಾಪಿ ಮಸೀದಿಯ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಮತ್ತು 1991 ರ ಆರಾಧನಾ ಸ್ಥಳಗಳ ಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಕಾಪು ಕ್ಷೇತ್ರ ಸಮಿತಿ ವತಿಯಿಂದ ಇಂದು ಕಾಪು ಬಸ್ ನಿಲ್ದಾಣ ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಎಸ್ಟಿಪಿಐ ಕಾಪು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಹನಿಫ್ ಮೂಳೂರು ದೇಶದಲ್ಲಿ ಮಂದಿರ ಮಸೀದಿ ಹೆಸರಿನಲ್ಲಿ ಬಿಜೆಪಿ ಹಾಗೂ ಸಂಘಪರಿವಾರ ನಡೆಸುತ್ತಿರುವ ಸಮಾಜ ವಿರೋಧಿ, ದೇಶ ವಿರೋಧಿ ರಾಜಕಾರಣದ ವಿರುದ್ಧವಾಗಿ 1991 ರ ಆರಾಧನಾ ಸ್ಥಳಗಳ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಬಾಬರೀ ಮಸೀದಿ ಹೊರತು ಪಡಿಸಿ ಉಳಿದ ಎಲ್ಲಾ ಮಂದಿರ, ಮಸೀದಿಗಳ ವಿಷಗಳಲ್ಲಿ 1947 ರಲ್ಲಿದ್ದ ಹಾಗೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಹೇಳಲಾಗಿದೆ. ಹೀಗಿದ್ದರೂ ಇದನ್ನು ಮರೆಮಾಚಿ ಗ್ಯಾನವ್ಯಾಪಿ ಮಸೀದಿಯ ಕೊಳದ ಕಾರಂಜಿಯನ್ನು ಶಿವಲಿಂಗ ಎಂದು ಬಿಂಬಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸಲಾಗುತ್ತಿದೆ ಎಂದರು.
ಇದನ್ನೂ ಓದಿ: SSP ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ
ಗ್ಯಾನ್ ವ್ಯಾಪಿ ಮಸೀದಿ ವಿರುದ್ಧದ ಷಡ್ಯಂತ್ರ ಖಂಡಿಸಿ ಎಸ್ಟಿಪಿಐ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಮಸೀದಿಯ ಸಂರಕ್ಷಣೆಗೆ ಪಕ್ಷ ಕಟಿಬದ್ಧವಾಗಿದ್ದು ಕಾನೂನು ಹೋರಾಟದ ಜೊತೆಗೆ ಬೀದಿ ಹೋರಾಟವನ್ನೂ ನಡೆಸಲಿದೆ ಎಂದರು. ಸಭೆಯನ್ನುದ್ದೇಶಿಸಿ ಕಾಪು ಪುರಸಭೆ ಸದಸ್ಯ ನೂರುದ್ದೀನ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಮಜಿದ್ ಉಚ್ಚಿಲ ಸದಸ್ಯರು ಎಸ್ಟಿಪಿಐ ಉಡುಪಿ ಜಿಲ್ಲಾ ಸಮಿತಿ, ಅಯೂಬ್ ಇಂಜಿನಿಯರ್ ಮಣಿಪುರ ಕಾರ್ಯದರ್ಶಿ ಎಸ್ಟಿಪಿಐ ಕಾಪು ವಿಧಾನಸಭಾ ಕ್ಷೇತ್ರ ,ರಜಾಕ್ ವೈ ಸಿ ಉಚ್ಚಿಲ, ಅಬ್ದುಲ್ ಖಾದರ್ ಮಲ್ಲಾರ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ಶ್ರೀ ಜಗದ್ಗುರು ರೇವಣಸಿದ್ದೇಶ್ವರ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆಗ್ರಹ