ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ನಿರ್ಧಾರವನ್ನು ಪ್ರಕಟಿಸಲು ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಇಂದು ಸಂಜೆ ತಮ್ಮ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಕರೆದಿದ್ದರು.
Speaker #RameshKumar disqualifies 3 MLA’s, R Shankar, Ramesh Jarkiholi & Mahesh Kumatalli for the entire term of the present Karnataka Vidhana Sabha.
Wholeheartedly welcome the verdict.#VictoryForDemocracy
— Dinesh Gundu Rao / ದಿನೇಶ್ ಗುಂಡೂರಾವ್ (@dineshgrao) July 25, 2019
ಪತ್ರಿಕಾಗೋಷ್ಠಿಯಲ್ಲಿ ಮೂವರು ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರಾಗಿರುವ ಆರ್. ಶಂಕರ್, ರಮೇಶ್ ಜಾರಕಿಹೊಳಿ ಮತ್ತು ಮಹೆಶ್ ಕುಮಟಳ್ಳಿ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಈ ಅನರ್ಹತೆ 15ನೇ ವಿಧಾನಸಭೆ ಅಸ್ತಿತ್ವದಲ್ಲಿ ಇರುವವರೆಗೆ ಈ ಅನರ್ಹತೆ ಎಂಬುದನ್ನೂ ಸ್ಪೀಕರ್ ಅವರು ಸ್ಪಷ್ಟಪಡಿಸಿದ್ದಾರೆ.
ಮುಖ್ಯಾಂಶಗಳು:
- ರಾಜೀನಾಮೆಯನ್ನು ಸಲ್ಲಿಸಿರುವ ಇನ್ನುಳಿದ ಅತೃಪ್ತ ಶಾಸಕರ ರಾಜೀನಾಮೆ ವಿಚಾರವನ್ನು ಕೆಲವೇ ದಿನಗಳಲ್ಲಿ ನಿರ್ಧರ
- ಅನರ್ಹಗೊಂಡಿರುವ ಶಾಸಕರು ಸುಪ್ರೀಂಕೋರ್ಟ್ ನ ಮೊರೆ ಹೋಗಲು ಸ್ವತಂತ್ರರಿದ್ದಾರೆ.
- ರಾಜೀನಾಮೆ ನೀಡಿರುವ ಶಾಸಕರು ತಮ್ಮ ರಾಜೀನಾಮೆಯನ್ನು ವಾಪಾಸು ಪಡೆದುಕೊಂಡರೆ, ಈ ಕುರಿತು ಮಾತನಾಡಲು ಒಪ್ಪದ ಸ್ಪೀಕರ್.
- ಶಾಸಕರೊಬ್ಬರಿಗೆ ತಮ್ಮ ಪಕ್ಷದ ನಿರ್ಧಾರಗಳ ಕುರಿತಾಗಿ ಭಿನ್ನಾಭಿಪ್ರಾಯಗಳಿದ್ದಲ್ಲಿ ಅದನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಬೇಕು.
- ಅತೃಪ್ತ ಶಾಸಕರು ಕರ್ನಾಟಕ ವಿಧಾನ ಸಭಾ ನಿಯಮಾವಳಿಗೆ ಅನುಗುಣವಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿರಲಿಲ್ಲ.