ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗುತ್ತಿಲ್ಲ ಸಂಬಳ: ಬಾಲರಾಜ ಆಕ್ರೋಶ

1
122

ಸೇಡಂ: ಆಪತ್ಕಾಲದಲ್ಲಿಯೂ ಸಹ ಸೇವೆ ಮಾಡಿದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸಂಬಳ ನೀಡದೇ ರಾಜ್ಯ ಸರಕಾರ ಸತಾಯಿಸುತ್ತಿರುವುದು ಖಂಡನೀಯ ಎಂದು ಜೆಡಿಎಸ್ ಅಭ್ಯರ್ಥಿ ಬಾಲರಾಜ ಗುತ್ತೇದಾರ ಆರೋಪಿಸಿದ್ದಾರೆ.

ಪಟ್ಟಣದಲ್ಲಿ ಮಾತನಾಡಿದ ಅವರು, ದಿನನಿತ್ಯ ಸರಕಾರದ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ, ಜನರ ಆಶೋತ್ತರಗಳಿಗೆ ಸ್ಪಂಧಿಸುವ ಕೆಲಸ ಅಂಗಮವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮಾಡುತ್ತಾರೆ. ಆದರೆ ಅವರಿಗೆ ಸರಿಯಾದ ಸಮಯಕ್ಕೆ ಸಂಬಳ ನೀಡುವಲ್ಲಿ ಸರಕಾರ ವಿಫಲವಾಗಿದೆ ಎಂದು ದೂರಿದ್ದಾರೆ. ಕೊರೋನಾ ಸಮಯದಲ್ಲಿ ತಮ್ಮ ಜೀವದ ಮೇಲಿನ ಹಂಗು ತೊರೆದು ದುಡಿದ ಕಾರ್ಯಕರ್ತರ ಇಂದಿನ ಪಾಡು ಹೇಳತೀರದಾಗಿದೆ. ಸರಕಾರ ಸಂಬಳ ನೀಡದೇ ಇರುವುದರಿಂದ ಜೀವನ ಸಾಗಿಸುವುದೇ ದುಸ್ತರವಾಗಿದೆ.

Contact Your\'s Advertisement; 9902492681

ಇದನ್ನೂ ಓದಿ:  ಕಾನೂನು ಪಾಲಿಸಿ ಮಾದರಿಯಾಗಲಿ: ಚಂದ್ರಶೇಖರ್

ಕೂಡಲೇ ಈ ಕುರಿತು ಸರಕಾರ ಗಂಭೀರವಾಗಿ ಪರಿಗಣಿಸಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ಸಮಯಕ್ಕೆ ಸಂಬಳ ಕಲ್ಪಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here