ಶಹಾಬಾದ: ಹೊನಗುಂಟಾ ಗ್ರಾಪಂ ವ್ಯಾಪ್ತಿಯಲ್ಲಿ ಕೈಗೊಂಡಿದ್ದ ನರೇಗಾ ಕಾಮಗಾರಿ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿಕರೊಬ್ಬರು ಸ್ಥಳದಲ್ಲಿಯೇ ಬಿದ್ದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಶಹಾಬಾದ ತಾಲೂಕಿನಲ್ಲಿ ಗುರುವಾರದಂದು ನಡೆದಿದೆ.
ಶಂಕರ ಸಾಯಿಬಣ್ಣ(೩೭) ಮೃತಪಟ್ಟಿರುವ ವ್ಯಕ್ತಿ. ಗುರುವಾರದಂದು ನರೇಗಾ ಯೋಜನೆಯಲ್ಲಿ ಕಾರ್ಮಿಕನಾಗಿ ನಾಲಾ ಹೋಳೆತ್ತುವ ಕಾಮಗಾರಿ ಮಾಡುತ್ತಿರುವ ಸಂದರ್ಭದಲ್ಲಿ ವಾಂತಿಯಾಗಿ ನೆಲಕ್ಕೆ ಕುಸಿದು ಬಿದ್ದಿದ್ದಾನೆ.ತಕ್ಷನವೇ ಸ್ಥಳದಲ್ಲಿದ್ದ ಕಾರ್ಮಿಕರು ಆಸ್ಪತ್ರೆಗೆ ಸಾಗಿಸಲು ಎಲ್ಲಾ ತಯ್ಯಾರಿ ಮಾಡಿಕೊಂಡು ಹೋಗುವಾಗಲೇ ಮೃತಪಟ್ಟಿದ್ದಾನೆ.
ಸುದ್ದಿ ತಿಳಿದ ತಕ್ಷಣವೇ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸಲಿಂಗಪ್ಪ ಡಿಗ್ಗಿ, ಗ್ರಾಪಂ ಪಿಡಿಓ ಕಾವೇರಿ, ಗ್ರಾಪಂ ಅಧ್ಯಕ್ಷೆ ಹಾಗೂ ಗ್ರಾಮದ ಮುಖಂಡ ದೇವೆಂದ್ರ ಕಾರೊಳ್ಳಿ ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸಲಿಂಗಪ್ಪ ಡಿಗ್ಗಿ, ವಿಷಯವನ್ನು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಗಮನಕ್ಕ ತರಲಾಗಿದೆ. ಕಾರ್ಮಿಕರ ಬಿಸಿಲಿನಲ್ಲಿ ಕೆಲಸ ಮಾಡಿದ್ದರಿಂದ ಈ ರೀತಿಯಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.ಹೀಗಾಗಿ ಮೃತಪಟ್ಟ ಶಂಕರ ಬಿಸಿಲಿನಿಂದ ಮೃತಪಟ್ಟಿದ್ದಾರೋ ಅಥವಾ ಹೃದಯಾಘಾತದಿಂದ ಮೃತಪಟ್ಟಿದ್ದಾರೂ ಎಂಬುದು ವೈದ್ಯರ ವರದಿಯ ಬಳಿಕ ತಿಳಿಯಲಿದೆ.ಆ ನಂತರವೇ ಪರಿಹಾರ ನೀಡಲು ಸಾಧ್ಯ ಎಂದು ಹೇಳಿದರು.