ಬೆಂಗಳೂರು: ಕರ್ನಾಟಕದ ಕಾರ್ಯನಿರತ ಪತ್ರಕರ್ತರ ಸಂಘ(KUWJ) ದ ಮನವಿ ಮೇರೆಗೆ ರಾಯಚೂರು ಜಿಲ್ಲೆ ಸಿರಿವಾರ ತಾಲ್ಲೂಕಿನ ಪ್ರಜಾವಾಣಿ ಪತ್ರಿಕೆಯ ವರದಿಗಾರ ಪಿ.ಕೃಷ್ಣ ಸಿರಿವಾರ ಅವರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿದ್ದ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದರು. ಈ ಸಂದರ್ಭದಲ್ಲಿ
ಖಾಸಗಿ ಆಸ್ಪತ್ರೆಯಲ್ಲಿ ಅವರ ಚಿಕಿತ್ಸೆಗಾಗಿ 4.5 ಲಕ್ಷ ಖರ್ಚಾಗಿದ್ದು, ಕುಟುಂಬ ಸಂಕಷ್ಟದಲ್ಲಿದೆ. ಅವರಿಗೆ ಆರ್ಥಿಕ ನೆರವು ಕೊಡಿಸುವಂತೆ ರಾಯಚೂರು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು, ರಾಜ್ಯ ಸಂಘಕ್ಕೆ ಮನವಿ ಮಾಡಿತ್ತು.
ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಮುಖ್ಯಮಂತ್ರಿ ಗಮನಕ್ಕೆ ತಂದು ಮನವಿ ಮಾಡಿದ ಮೇರೆಗೆ ಕೂಡಲೆ, 2ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಪರಿಹಾರ ಮಂಜೂರು ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ವು ಕೃತಜ್ಞತೆ ಸಲ್ಲಿಸುತ್ತದೆ.