ಕಲಬುರಗಿ: ರಾಜ್ಯ ಸರ್ಕಾರದ ಜನವಿರೋಧಿ ನೀತಿ, ಪಠ್ಯಪುಸ್ತಕದಲ್ಲಿ ಮಹನೀಯರ ಅವಹೇಳನ ಹಾಗೂ ಅಪರಿಮಿತ ಭ್ರಷ್ಟಾಚಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಹಾಗೂ ಯೂಥ್ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಗೆ ಜಗತ್ ವೃತ್ತದ ಬಳಿ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿದ ಕಾರ್ಯಕರ್ತರು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದರು.
ಪಠ್ಯಪುಸ್ತಕ ದಲ್ಲಿ ಕೇಸರಿಕರಣಗೊಳಿಸುತ್ತಿರುವ ಸರ್ಕಾರ ಕರ್ನಾಟಕದ ಅಸ್ಮಿತೆಗೆ ಧಕ್ಕೆಗೊಳಿಸುತ್ತಿದೆ. ಪಠ್ಯಪುಸ್ತಕಗಳನ್ನು ವಾಪಸ್ ಪಡೆಯುವವರೆಗೆ ಕಾಂಗ್ರೆಸ್ ಹೋರಾಟ ನಿಲ್ಲವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಕರ್ನಾಟಕದ ಅಸ್ಮಿತೆ ಉಳಿಸಲು ಆಹೋರಾತ್ರಿ ಧರಣಿ ಕೈಗೊಂಡಿರುವ ಸಂದರ್ಭದಲ್ಲಿ ಜನಪರ ಹೋರಾಟಗಾರರು, ಕವಿ ಸಾಹಿತಿಗಳು, ಬುದ್ದಿಜೀವಿಗಳು, ಪ್ರಗತಿಪರ ಚಿಂತಕರು, ದಲಿತ ಪರ ಸಂಘಟನೆಕಾರರು, ಕನ್ನಡಪರ ಹಾಗೂ ರೈತಪರ ಹೋರಾಟಗಾರರು, ಹಲವಾರು ಸಮಾಜದ ಮುಖಂಡರು ಭಾಗವಹಿಸಿ ತಮ್ಮ ಬೆಂಬಲ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಡಾ ಶರಣಪ್ರಕಾಶ ಪಾಟೀಲ, ಜಗದೇವ ಗುತ್ತೇದಾರ, ಮಾಜಿ ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಅಲ್ಲಮಪ್ರಭು ಪಾಟೀಲ, ಶರಣಕುಮಾರ ಮೋದಿ, ಲತಾ ರವಿ ರಾಠೋಡ, ಬಾಬುರಾವ್ ಚವ್ಹಾಣ, ಕೆ. ನೀಲಾ, ಶಿವಾನಂದ ಪಾಟೀಲ, ಭೀಮಣ್ಣ ಸಾಲಿ, ಜಗನಗೌಡ ರಾಮತೀರ್ಥ, ಮಜರ್ ಅಹಮದ್ ಖಾನ್, ಡಾ ಕಿರಣ್ ದೇಶಮುಖ, ರಾಜೀವ್ ಜಾನೆ, ಪ್ರವೀಣ ಹರವಾಳ, ಸುನೀಲ್ ದೊಡ್ಡಮನಿ, ಶಿವರುದ್ರ ಬೇಣಿ, ಮಲ್ಲಪ್ಪ ಹೊಸಮನಿ, ಮಲ್ಲಿಕಾರ್ಜುನ ಕಾಳಗಿ, ಈರಣ್ಣ ಝಳಕಿ, ಫಾರೂಕ್ ಸೇಠ್ ಸೇರಿದಂತೆ ಮತ್ತಿತರಿದ್ದರು.