ಕಲಬುರಗಿ: ನಗರದ ಪ್ರತಿಷ್ಠತ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವ್ಹಿ. ಜಿ. ಮಹಿಳಾ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ವತಿಯಿಂದ “ಕಾಂವರ್ವೆ – ೨೨” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ನಗರದ ವಿವಿಧ ಪದವಿ ಪೂರ್ವ ಕಾಲೇಜಗಳಲ್ಲಿ ೨೦೨೨ರಲ್ಲಿ ವಾಣಿಜ್ಯ ವಿಭಾಗದಲ್ಲಿ ಅತಿಹೆಚ್ಚು ಅಂಕ ಪಡೆದ ೨೫ ಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನು ಮತ್ತು ಪಾಲಕರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮಕ್ಕೆ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಮೀನಾಕ್ಷಿ ಬಾಳಿ ಅವರು ಸಸಿಗೆ ನೀರೆರೆರುವ ಮೂಲಕ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಹಿಂದಿ ವಿಭಾಗದ ಪ್ರಾಧ್ಯಾಪಕರಾದ ಡಾ. ಪ್ರೇಮಚಂದ ಚವ್ಹಾಣ ಅವರು ಭಾಗವಹಿಸಿದ್ದರು.
ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಉಮಾ ರೇವೂರ ಅವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿ.ಕಾಂ ವಿದ್ಯಾರ್ಥಿನಿಯರು ಕಾರ್ಯಕ್ರಮ ನಿರೂಪಿಸಿದರು. ಪ್ರಾರಂಭದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು. ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.