ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ 2022ನೇ ಸಾಲಿನಲ್ಲಿ 19 ಸಾವಿರ ಮತದಾರರನ್ನು ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲಾಗಿದ್ದು, ಜೊತೆಗೆ 25 ಸಾವಿರ ಹೊಸ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಎಸ್.ಡಿ.ಪಿ.ಐ ಜಿಲ್ಲಾ ಘಟಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
SDPI ಪಕ್ಷದ ಜಿಲ್ಲಾ ಮುಖಂಡರಾದ ಸಯಿದೋದ್ದಿನ್ ಫಾರೂಖಿ ನೇತೃತ್ವದ ತಂಡ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಕಳೆದ 2022ನೇ ಸಾಲಿನ ಈ ಆರು ತಿಂಗಳಲ್ಲಿ 19.644 ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದ್ದು, 874 ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಅಲ್ಲದೇ ಕಳೆದ ನಾಲ್ಕು ವರ್ಷಗಳಲ್ಲಿ 45 ಸಾವಿರ ಹೊಸ ಮತದಾರರ ಸೇರ್ಪಡೆ ಮಾಡಲಾಗಿದೆ.
ಕಲಬುರಗಿ ಉತ್ತರ ಕ್ಷೇತ್ರದಲ್ಲಿ 2019 ರಲ್ಲಿ 22 ಸಾವಿರಕ್ಕು ಹೆಚ್ಚು ಹೊಸ ಮತದಾರರನ್ನು ಮತದಾನ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ, ಆಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತು ತೆಗೆದು ಹಾಕು ಪ್ರಕ್ರಿಯ ನಡೆದಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಸಿ ಕೂಡಲೇ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿರುವ ಹೆಸರುಗಳನ್ನು ಸೇರ್ಪಡೆ ಗೊಳಿಸುವ ಕಾರ್ಯಾ ನಡೆಸಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಅಬ್ದುಲ್ ರಹೀಮ್ ಪಟೇಲ್, ಸೈಯದ್ ಅಲೀಮ್ ಇಲಾಹಿ, ಅಬ್ದುಲ್ ರಹೀಮ್ ಭಾಷಾ ಸೇರಿದಂತೆ ಹಲವರು ಇದ್ದರು.