ಮೆಟ್ರಿಕ್ ನಂತರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

0
323

ಕಲಬುರಗಿ: ಪ್ರಸಕ್ತ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಕಲಬುರಗಿ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಭರ್ತಿ ಮಾಡಲು ಆಸಕ್ತಿಯುಳ್ಳ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅಂಗೀಕೃತ ಕಾಲೇಜುಗಳಲ್ಲಿ ಪಿಯುಸಿಯಿಂದ ಸ್ನಾತಕೋತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ  ವಿದ್ಯಾರ್ಥಿಗಳಿಗೆ ಶೇ75 ರಷ್ಟು ಸ್ಥಾನ ಹಾಗೂ ಶೇ25 ರಷ್ಟು ಸ್ಥಾನಗಳನ್ನು ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ಆಸಕ್ತ್ತಿಯುಳ್ಳ ವಿದ್ಯಾರ್ಥಿಗಳು 2022ರ ಆಗಸ್ಟ್ 15 ರೊಳಗಾಗಿ https://sevasindhu.karnataka.gov.in ಸೇವಾಸಿಂಧು ಪೋರ್ಟಲ್‍ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Contact Your\'s Advertisement; 9902492681

ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಕಲಬುರಗಿ ಮತ್ತು  ಅಫಜಲಪೂರ ಇವರ ಮೊಬೈಲ್ ಸಂಖ್ಯೆ 9741279422, ಜೇವರ್ಗಿ-9535775141, ಆಳಂದ-8147775722,  ಸೇಡಂ-7892369798, ಚಿತ್ತಾಪೂರ-9741168681, ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ಕಚೇರಿ ದೂರವಾಣಿ ಸಂಖ್ಯೆ 08472 247260 ಹಾಗೂ ರಾಜ್ಯ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990(24*7) ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here