ಕಲಬುರಗಿ: ನಗರದ ಹಳೆ ಜೇವರ್ಗಿ ರಸ್ತೆಯ ಪಂಚಶೀಲ ನಗರದಲ್ಲಿ ಕಾರು ಹಾಯಿದ ಪರಿಣಾಮ ಪಾದಚಾರಿ ವೂರ್ವ ಸ್ಥಳದಲ್ಲಿಯೇ ಸಾವು ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕರಣಕುಮಾರ ತಳವಾರ (35) ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ಕರಣಕುಮಾರ ನಗರದ ಪಂಚಶೀಲ ಬಡಾವಣೆಯ ನಿವಾಸಿ ಎಂದು ಗುರುತಿಸಲಾಗಿದ್ದು, ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ನಂತರ ಕಾರು ಸಮೇತ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದ್ದು, ಆರೋಪಿಗಳ ಬಂಧನಕ್ಕೆ ಕುಟುಂಬಸ್ಥರು ರಸ್ತೆಯ ಮೇಲೆ ಶವವಿಟ್ಟು ಪ್ರತಿಭಟನೆ ನಡೆಸಿ, ಘಟನೆಯ ತನಿಖೆ ನಡೆಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದರು.
ಈ ಕುರಿತು ಕಲಬುರಗಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.