ರೈತರ ಸಾಲ ಮನ್ನಾ ಮಾಡಲು ಮಾನ್ಪಡೆ ಆಗ್ರಹ

0
47

ಕಲಬುರಗಿ: ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈತರ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಅವರು ಇಲ್ಲಿ ಒತ್ತಾಯಿಸಿದರು.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕಿವಿ ಹಿಂಡಿಯಾದರೂ ರೈತರ ಸಾಲ ಮನ್ನಾ ಮಾಡಿಸುತ್ತೇನೆ ಎಂದಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದು, ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಹಿಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸುಮಾರು ೪೬೦೦೦ ಕೋಟಿ ರೂ.ಗಳ ರೈತರ ಸಾಲ ಮನ್ನಾಕ್ಕೆ ಚಾಲನೆ ನೀಡಿದ್ದಾರೆ. ಆ ಎಲ್ಲ ಸಾಲ ಮನ್ನಾ ಮಾಡುವ ನಿಟ್ಟಿನಲ್ಲಿ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕೆಲವು ಕಡೆ ಮಳೆಯಾಗಿದೆ. ಇನ್ನೂ ಕೆಲವೆಡೆ ಬರ ಬಿದ್ದಿದೆ. ಬರ ಬಿದ್ದ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಕೊಡಬೇಕು ಎಂದು ಆಗ್ರಹಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here