ರಾಯಚೂರು: ಸೋಮವಾರ ನಸುಕಿನ ಜಾವ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ನಡೆದಿದೆ.
ಮೃತರೆಲ್ಲರೂ ಮಧ್ಯ ಪ್ರದೇಶದ ಇಂದೋರನ ಒಂದೇ ಕುಟುಂಬದ ಸದಸ್ಯರು ಎಂದು ಅಂದಾಜಿಸಲಾಗಿದ್ದು, ಅಪಘಾತ ಸ್ಥಳದಲ್ಲಿ ಓರ್ವ ಮಹಿಳೆ, ಪುರುಷ ಹಾಗೂ ಎರಡು ಮಕ್ಕಳ ದೇಹಗಳು ಪತ್ತೆಯಾಗಿವೆ.
ಅಪಘಾತ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಜೆಸಿಬಿ ಮೂಲಕ ವಾಹನಗಳನ್ನು ತೆರವುಗೊಳಿಸಲಾಗಿದೆ. ಅಪಘಾತನ ನಂತರ ಲಾರಿ ಚಾಲಕ ಪರಾರಿಯಾಗಿದ್ದು, ಮೃತ ದೇಹಗಳನ್ನು ಸಿಂಧನೂರು ಶವಾಗಾರಕ್ಕೆ ಕಳುಹಿಸಿಕೊಡಲಾಗಿದೆ.
ಸ್ಥಳಕ್ಕೆ ಬಳಗಾನೂರ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನೆ ಕ್ರಮ ಕೈಗೊಳ್ಳುತ್ತಿದ್ದಾರೆ.