ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಆಯ್ಕೆ

0
18

ಸುರುಪುರ: ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಸೂಪರ್ 30 ರೀತಿ (ಆರ್.ಇ.ಟಿ.ಇ ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಆಯ್ಕೆಯಾಗಿದೆ ಎಂದು ಜಂಟಿ ಕಾರ್ಯದರ್ಶಿಗಳಾದ ದೊಡ್ಡಪ್ಪ ಎಸ್ ನಿಷ್ಠಿ ಹಾಗೂ ಪ್ರಾಚಾರ್ಯ ಡಾ. ಶರಣಬಸಪ್ಪ ಸಾಲಿ ತಿಳಿಸಿದ್ದಾರೆ.

ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ `ರೀತಿ’ (ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ಆಯ್ಕೆ ಆಗಿರುವುದು ಹರ್ಷ ತರಿಸಿದೆ.

Contact Your\'s Advertisement; 9902492681

ಇದನ್ನೂ ಓದಿ: ಪತ್ರಕರ್ತರು ದೇಶದ ಅಭಿವೃಧ್ಧಿಗೆ ನಾಲ್ಕನೆ ಅಂಗವಿದ್ದಂತೆ: ರಾಜುಗೌಡ ಶಾಸಕ

ಇದರಿಂದಾಗಿ ಇನ್ನು ಹೆಚ್ಚಿನ ರೀತಿಯಲ್ಲಿ ನಿಯೋಜನೆ ಚಟುವಟಿಕೆ ಗಳು, ಕೌಶಲ್ಯ ತರಬೇತಿ ಕಾರ್ಯಕ್ರಮಗಳು ಮತ್ತು ಉದ್ಯಮಶೀಲತೆಯ ಚಟುವಟಿಕೆ ನಡೆಸಿಕೊಡಲು ಅನುಕೂಲವಾಗುತ್ತದೆ.

ವಿದ್ಯಾರ್ಥಿಗಳಿಗೆ ತಮ್ಮ ಜಿಲ್ಲೆಗಳಲ್ಲೇ ಅತ್ಯುನ್ನತ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರಕಾರದ ಗುರಿಯಾಗಿದೆ. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸಲು ಹೋದ ವರ್ಷದ ನವೆಂಬರಿನಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗಿತ್ತು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ನೇತೃತ್ವದ ಸಮಿತಿಯು ಮಂಗಳವಾರ ಸರಕಾರಕ್ಕೆ ತನ್ನ ವರದಿ ಸಲ್ಲಿಸಿತು. ಕಾಲೇಜು ಆಯ್ಕೆ ಆಗಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಟ್ವಿಟ್ ಕೂಡ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿರೇಸಾವಳಗಿಯ ಶ್ರೀ ಶಿವಲಿಂಗೇಶ್ವರ ಮಹಾಪುರಾಣ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here