ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಈ ಭಾಗದ ಶೈಕ್ಷಣಿಕ ಪ್ರಗತಿಗೆ ನಾನು ನಿಮ್ಮ ಜತೆಗೂಡಿ ಕೆಲಸ ಮಾಡಲು ಸದಾ ಸಿದ್ಧನಿದ್ದೇನೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ ಹೇಳಿದರು.
ಕಲಬುರಗಿ ವಿಭಾಗದಿಂದ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ಹೊಂದಿದ ಶಿಕ್ಷಕರ ಶುಭಕೋರುವ ಹಾಗೂ ಕಲ್ಯಾಣ ಕರ್ನಾಟಕ ಭಾಗದ ನೂತನವಾಗಿ ಆಯ್ಕೆಯಾದ ಪ್ರೌಢಶಾಲಾ ಸಹ ಶಿಕ್ಷಕರ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಅಪರ ಆಯುಕ್ತರ ಕಾರ್ಯಾಲಯದ ನಿರ್ದೇಶಕರಾದ ಜಿ ಎಂ ಜಯಕುಮಾರ್ ಅವರು ಆಗಮಿಸಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಕೋಶಾಧ್ಯಕ್ಷ ಧನಸಿಂಗ್ ರಾಠೋಡ, ಕಲಬುರಗಿ ಜಿಲ್ಲಾಧ್ಯಕ್ಷ ಮಹೇಶ ಹೂಗಾರ ಯಾದಗಿರಿ, ಜಿಲ್ಲಾಧ್ಯಕ್ಷ ಅಶೋಕ ಕೆಂಭಾವಿ, ರಾಯಚೂರು ಜಿಲ್ಲಾ ಅಧ್ಯಕ್ಷ ಪ್ರಭುಲಿಂಗ ಗದ್ದಿ, ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಜಮೀಲ್ ಇಮ್ರಾನ್, ಸಾವಿತ್ರಿಬಾಯಿ ಫುಲೆ ಸಂಘದ ಜಿಲ್ಲಾಧ್ಯಕ್ಷೆ ಶೇವಂತಾ ಚವ್ಹಾಣ, ಅನುದಾನಿತ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಬಿ ಜಿ ಪಾಟೀಲ್, ಅನುದಾನಿತ ಶಿಕ್ಷಕರ ಸಂಘದ ರಾಜ್ಯ ಕಾರ್ಯದರ್ಶಿ ಹನೀಫ್ ಮಕಾಂದಾರ್, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ವಿಭಾಗ ಪ್ರಮುಖ ಮಹೇಶ್, ಜಿಲ್ಲಾಧ್ಯಕ್ಷ ಚಂದ್ರಶೇಖರ್ ಪಾಟೀಲ್, ಕಾರ್ಯದರ್ಶಿ ಸಂಜೀವಕುಮಾರ ಪಾಟೀಲ್, ವಿಭಾಗದ ತಾಲ್ಲೂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ರಾಜ್ಯ ಪರಿಷತ್ ಸದಸ್ಯರು ಮುಂತಾದವರು ಹಾಜರಿದ್ದರು.