ಸೇಡಂ: ತಾಲೂಕಿನ ಯಾನಾಗುಂದಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಅದರಿಂದ ಮಾಣಿಕಮ್ಮನವರ ದರ್ಶನಕ್ಕೆ ಬರುವ ಭಕ್ತಾದಿಗಳು ತೊಂದರೆ ಅನುಭವಿಸುವಂತಾಗಿದೆ ಕೂಡಲೇ ಕಾರಣ ನೀರಿನ ಸಮಸ್ಯೆ ಪರಿಹರಿಸುವಂತೆ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ನೀರಿನ ಸಮಸ್ಯೆ ಯಿಂದ ಅಲ್ಲಿನ ವ್ಯಾಪಾರಸ್ಥರು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ, ಕೂಡಲೇ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.