ಶಹಾಪುರ: ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ಎಸ್.ರಾಂಪುರ(೫೧) ಗುರುವಾರ ಹೃದಯಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ ವಕೀಲೆ ಬಸಮ್ಮ ಹಾಗೂ ಓರ್ವ ಪುತ್ರಿ ಇದ್ದಾರೆ.
ಅವರ ಅಂತ್ಯಕ್ರಿಯೆ ಸ್ವ ಗ್ರಾಮ ಲಿಂಗಸೂಗೂರ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಶುಕ್ರವಾರ(ಆ.೨೬) ರಂದು ಮಧ್ಯಾಹ್ನ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.