ಶಹಾಬಾದ: ರಾಜಸ್ಥಾನದಲ್ಲಿ ದಲಿತ ಬಾಲಕನ ಸಾವಿಗೆ ಕಾರಣ ಎನ್ನಲಾದ ಆರೋಪಿ ಶಿಕ್ಷಕನಿಗೆ ಮರಣದಂಡನೆ ವಿಧಿಸಬೇಕೆಂದು ದಲಿತ ಮಾದಿಗ ಸಮನ್ವಯ ಸಮಿತಿಯ ಜಿಲ್ಲಾ ಪತ್ರಿಕಾ ಮಾಧ್ಯಮ ಅಧ್ಯಕ್ಷ ರವಿ ಬೆಳಮಗಿ ಆಗ್ರಹಿಸಿದ್ದಾರೆ.
ರಾಜಸ್ಥಾನದ ಜಾಲೋರ್ ಜಿಲ್ಲೆಯ ಸೂರನ್ ಗ್ರಾಮದ ಖಾಸಗಿ ಶಾಲೆಯಲ್ಲಿ ಓದುತ್ತಿರುವ ಪರಿಶಿ? ಜಾತಿಯ ಒಂಬತ್ತು ವ?ದ ಇಂದ್ರ ಕುಮಾರ್ ಮೆಘವಾಲ್ ಬಾಲಕ, ಶಾಲೆಯಲ್ಲಿನ ಕುಡಿಯುವ ನೀರಿನ ಮಡಿಕೆ ಮುಟ್ಟಿದ್ದಕ್ಕಾಗಿ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಆತನ ಸಾವಿಗೆ ಕಾರಣನಾದ ಶಿಕ್ಷಕನಿಗೆ ಮರಣದಂಡನೆ ವಿಧಿಸಬೇಕು.ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂದು ರವಿ ಬೆಳಮಗಿ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.