ಕೋಲಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಶಾಸಕ ಕಮಕನೂರ್ ಆಗ್ರಹ

0
88

ಕಲಬುರಗಿ: ಕೋಲಿ ಸಮಾಜದ ೩೯ ಪರ‍್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ಸಿನ ರಾಜ್ಯ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಅವರು ಒತ್ತಾಯಿಸಿದರು.

ವಿಧಾನಮಂಡಲದ ಅಧಿವೇಶನದ ಮೇಲ್ಮನೆ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಹಲವಾರು ವರ್ಷಗಳಿಂದ ಸಮಾಜವು ಒತ್ತಾಯಿಸುತ್ತಿದೆ. ಹಲವಾರು ಸಂದರ್ಭಗಳಲ್ಲಿ ನಿರಂತರ ಹೋರಾಟಗಳನ್ನು ಮಾಡಲಾಗುತ್ತಿದೆ. ಆದ್ದರಿಂದ ಬಹುದಿನಗಳಿಂದ ಬಾಕಿ ಇರುವ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು.

Contact Your\'s Advertisement; 9902492681

ಈಗಾಗಲೇ ಹೈದ್ರಾಬಾದ್ ಕರ್ನಾಟಕಕ್ಕೆ ೩೭೧(ಜೆ) ಕಲಂ ಜಾರಿಯಾಗಿದೆ. ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರತಿ ವರ್ಷ ರಾಜ್ಯ ಸರ್ಕಾರವು ೧,೫೦೦ ಕೋಟಿ ರೂ.ಗಳನ್ನು ಕೊಡುತ್ತಿದೆ. ಪ್ರಸ್ತುತ ವರ್ಷದಿಂದ ಇನ್ನೂ ೧೦೦೦ ಕೋಟಿ ರೂ.ಗಳನ್ನು ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here