ಶಿಕ್ಷಣ ವ್ಯವಸ್ಥೆ ಸಮಕಾಲಿನಗೊಳಿಸಲು ಹೊಸ ಶಿಕ್ಷಣ ನೀತಿ ಜಾರಿ

0
18

ಬೆಂಗಳೂರು: ಭಾರತದ ಶಿಕ್ಷಣ ವ್ಯವಸ್ಥೆ ವಿಶ್ವದಲ್ಲೆ  ಹೆಚ್ಚು ವಿಸ್ತಾರವಾದದ್ದು ಮತ್ತು ದೊಡ್ಡದುಕೂಡ. ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸಮಕಾಲಿನಗೊಳಿಸಲು ಹೊಸ ಶಿಕ್ಷಣ ನೀತಿ 2020ನ್ನು ಜಾರಿಗೊಳಿಸಲಾಯಿತು ಎಂದು ಗೌರವಾನ್ವಿತ ರಾಜಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಂಗಸಂಸ್ಥೆ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸ್ವಾಯತ್ತತೆಯ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸ್ವಾಯತ್ತತೆ ಪಡೆದ ವಿವೇಕಾನಂದ ವಿದ್ಯಾಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದರು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವರ್ತಮಾನ ಹಾಗೂ ಭವಿಷ್ಯವನ್ನು ಉಜ್ವಲ ಮತ್ತು ಸುರಕ್ಷಿತಗೊಳಿಸಲಿದೆ. ಪ್ರಪ್ರಥಮವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ ಗರಿಮೆ ಕರ್ನಾಟಕ ರಾಜ್ಯಕ್ಕಿದೆ ಎಂದರು.

ಮೌಲ್ಯಯುತ ಮತ್ತು ಕೌಶಲ್ಯಾಧಾರಿತ ಶಿಕ್ಷಣದ ಜೊತೆಗೆ ವಿವಿಧ ಆಯಾಮಗಳಲ್ಲಿ ಆತ್ಮನಿರ್ಭರ ಭಾರತದ ಉದ್ದೇಶವನ್ನು ಸಾಕಾರಗೊಳಿಸುವಲ್ಲಿ ವಿವೇಕಾನಂದ ಮಹಾವಿದ್ಯಾಲಯ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಬಹುವಿಷಯಾಧಾರಿತ ಶಿಕ್ಷಣ ನೀಡುತ್ತಿರುವ ವಿದ್ಯಾಸಂಸ್ಥೆ ಪ್ರಸ್ತುತ ಸ್ವಾಯತ್ತತೆಯ ಸ್ಥಾನಮಾನವನ್ನು ಪಡೆದಿದೆ. ಯಾವುದೇ ಸಂಸ್ಥೆ ಸ್ವಾಯತ್ತತೆಯನ್ನು ಪಡೆಯುವುದು ಪ್ರಗತಿಯ ಶುಭಸಂಕೇತ ಎಂದು ಹೇಳಿದರು.

ರಾಷ್ಟ್ರದ ಅಖಂಡತೆ, ರಾಷ್ಟ್ರೀಯತೆ ಆಧಾರಿತ ಸಮಾಜದ ದೃಷ್ಟಿಕೋನ, ಮಾತೃಭಾಷೆಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡಲಾಗಿದೆ. ಧರ್ಮ-ಸಂಸ್ಕೃತಿಯ ರಕ್ಷಣೆ, ಸಮಾಜದ ಉದ್ದೇಶಗಳನ್ನು ಶಿಕ್ಷಣದ ಮೂಲಕ ಈಡೇರಿಸುವ ವಿಶ್ವಾಸವಿದೆ. ನಮ್ಮ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ತರುಣರು ತಾವು ಕಂಡ ಗುರಿಯನ್ನು ಸಾಧಿಸುವ ಸಂಕಲ್ಪ ತೊಟ್ಟು, ಕಾರ್ಯಪ್ರವೃತ್ತರಾಗಬೇಕು. ರಾಷ್ಟ್ರದ ನಾಗರಿಕರಾಗಿ ನಾಡಿನ ಸಮಗ್ರ ಏಳಿಗೆಗೆ ನಮ್ಮೆಲ್ಲರ ಯೋಗದಾನ ಅಗತ್ಯ. ದೇಶಭಕ್ತಿಯ ವಾತಾವರಣವನ್ನು ಮನೆಮನೆಯಲ್ಲೂ ನಿರ್ಮಿಸುವ ಮೂಲಕ ಅಸಂಖ್ಯಾತ ಮಹನೀಯರ ಕಾರಣಕ್ಕಾಗಿ ಗಳಿಸಿದ ವಿಶ್ವಗುರು ಸ್ಥಾನವನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹಸರಕಾರ್ಯವಾಹ ಮುಕುಂದ್ ಸಿ ಆರ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಎಂ.ಕೃಷ್ಣಭಟ್, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಸ್ವಾಯತ್ತ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ್ ಹೆಚ್.ಜಿ., ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪ್ರಾಚಾರ್ಯ ವಿಷ್ಣುಗಣಪತಿ ಭಟ್ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here