ಮುರುಘಾ ಶರಣರನ್ನು ಗಡಿಪಾರು ಮಾಡಿ: ಶಿವಲಿಂಗ ಹಸನಾಪುರ

0
18

ಸುರಪುರ: ವಿದ್ಯಾರ್ಥಿನಿಲಯದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಮುರುಘಾ ಶರಣರ ಮೇಲೆ ಕಠಿಣ ಕ್ರಮ ಕೈಗೊಂಡು ನಂತರ ಅವರನ್ನು ದೇಶದಿಂದ ಗಡಿಪಾರು ಮಾಡುವಂತೆ ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಆಗ್ರಹಿಸಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಿ.ಸಿ ಸಾಗರ ಬಣದಿಂದ ನಗರದ ತಹಸೀಲ್ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ದೇಶದಲ್ಲಿ ಹಿಂದಿನಿಂದಲೂ ದಲಿತರ ಮೇಲೆ ಹಲ್ಲೆ ಅತ್ಯಾಚಾರ ಕೊಲೆಗಳು ನಡೆಯುತ್ತಿವೆ,ಆದರೆ ಸರಕಾರ ಮಾತ್ರ ದಲಿತರ ಮೇಲಿನ ಅತ್ಯಾಚಾರಗಳನ್ನು ತಡೆಯುವಲ್ಲಿ ವಿಫಲವಾಗಿದೆ.

Contact Your\'s Advertisement; 9902492681

ಈಗ ಚಿತ್ರದುರ್ಗದ ಮುರುಘಾ ಶ್ರೀಗಳು ಕೂಡ ವಿದ್ಯಾರ್ಥಿನಿಲಯದಲ್ಲಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ,ಆದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ.ಆದ್ದರಿಂದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಹಾಗು ಫೋಕ್ಸೊ ಕಾಯ್ದೆಯಡಿ ಮುರುಘಾ ಶ್ರೀಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಜೊತೆಗೆ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಸಂಚಾಲಕ ವೀರಭದ್ರಪ್ಪ ತಳವಾರಗೇರಾ,ಮುಖಂಡರಾದ ತಿಪ್ಪಣ್ಣ ಶೆಳ್ಳಗಿ,ಎಮ್.ಪಟೇಲ್,ಮರಿಲಿಂಗ ಗುಡಿಮನಿ,ವೆಂಕಟೇಶ ದೇವಾಪುರ,ಶೇಖರ ಮಂಗಳೂರ,ಶಿವಪ್ಪ ಶೆಳ್ಳಗಿ,ಮಾನಪ್ಪ ಭಂಡಾರಿ ಶೆಳ್ಳಗಿ,ಹಸನಪ್ಪ ದೇವಾಪುರ,ಮೌನೇಶ ತಿಂಥಣಿ,ಪರಶುರಾಮ ಹುಣಸಿಹೊಳೆ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here