ಚಿಂಚೋಳಿ: ಶ್ರೀಶಿವಮೂರ್ತಿ ಶರಣರ ಬಂಧನ ಸಾಲದು | ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

0
397

ಚಿಂಚೋಳಿ: ಚಿತ್ರದುರ್ಗ ಜಿಲ್ಲೆಯ ಮುರುಘಾ ಮಠದ ವಸತಿ ನಿಲಯದ ವಿದ್ಯಾರ್ಥಿನಿಯರ ಮೇಲಾದ ಘಟನೆಯನ್ನು ಖಂಡಿಸಿ ಇನ್ನೂ ೩೦ ವಿದ್ಯಾರ್ಥಿನಿಯರ ಮೇಲಾದ ದೌರ್ಜನ್ಯ ನಿಷ್ಪಕ್ಷಪಾತವಾದ ತನಿಖೆಗೆ ಒತ್ತಾಯಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ತಹಶೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ಶ್ರೀಶಿವಮೂರ್ತಿ ಶರಣರಿಗೆ ಬಂಧಿಸಿದರೆ ಸಾಲದು ಕೂಡಲೆ ಅದರ ನೈಜತೆ ಹೊರಬರಬೇಕು. ಇನ್ನೂ 30 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ನಿಷ್ಪಕ್ಷಪಾತವಾದ ತನಿಖೆಯಿಂದ ಬಯಲಿಗೆಳೆದು ತಪ್ಪಿತಸ್ತರಿಗೆ ಕಠಿಣ ಶಿಕ್ಷೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ತಾಲೂಕ ದಂಡಾಧಿಕಾರಿಗಳಾದ ಅಂಜುಮ್ ತಬ್ಸುಮ ಮಖಾಂತರ ರಾಜ್ಯಪಾಲರಿಗೆ ಒತ್ತಾಯಿಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ  ದಲಿತ, ವಿದ್ಯಾರ್ಥಿ ಸಂಘಟನೆಗಳ ಹಾಗೂ ಪ್ರಗತಿಪರ ಸಂಘಟನೆಗಳ ಅದ್ಯಕ್ಷರು ಹಾಗೂ ಪದಾಧಿಕಾರಿಗಳು ವಿವಿದ ಸಮಾಜದ ಯುವ ಮುಖಂಡರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here