ಕಲಬುರಗಿ: ನಗರದ ಗಂಜ್ ಪ್ರದೇಶದಲ್ಲಿರುವ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಠಾಣೆ ಅಧಿಕ್ಷರಾದ ಸೋಮಲಿಂಗ ಕಿರ್ದಳಿ ಅವರು ನೇತೃತ್ವದಲ್ಲಿ ಪೂರ್ವಭಾವಿ ಶಾಂತಿ ಸಭೆ ಜರುಗಿತ್ತು.
ಸಭೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಸಾರ್ವವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಜಿಲ್ಲೆಯಲ್ಲಿ ಬಕ್ರೀದ್ ಹಬ್ಬ ಶಾಂತಿಯುತವಾಗಿ ಆಚರಿಸಿ, ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಸಾರ್ವಜನಿಕರಲ್ಲಿ ಠಾಣೆಯ ಅಧಿಕ್ಷ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಠಾಣೆಯ ಸಿಬ್ಬಂದಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.