ಕಲಬುರಗಿ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರ ವಿರುದ್ಧ ಆರ್ಯ ಈಡಿಗ ಸಮಾಜ ಆಕ್ರೋಶ: ಕ್ರಮಕ್ಕೆ ಆಗ್ರಹ

0
54

ಕಲಬುರಗಿ: ಜಿಲ್ಲಾಧಿಕಾರಿ ಯಶ್ವಂತ್ ಗುರುಕರ್ ಮತ್ತು ಪೋಲೀಸ್ ಆಯುಕ್ತರಾದ ರವಿ ಕುಮಾರ್ ಅವರ ನಡೆಗೆ ಆರ್ಯ ಈಡಿಗ ಸಮಾಜದ ಗುರುಗಳಾದ ಪ್ರಣವಾನಂದ ಸ್ವಾಮೀಜಿ ಮತ್ತು ಈಡಿಗ ಕುಲಬಾಂಧವರು ಖಂಡನೆ ವ್ಯಕ್ತಪಡಿಸಿದ್ದಾರೆ.

ಬ್ರಹ್ಮಶ್ರೀ ನಾರಾಯಣಗುರುಗಳ  168 ನೆ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳು ಆದ DC ಮತ್ತು police commissioner ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಹಾಗೂ ಈಡಿಗ ಸಮುದಾಯಕ್ಕೂ ಅಪಮಾನ ಮಾಡಿರುತ್ತಾರೆ ಎಂದು ಆರೋಪಿಸಿದ್ದಾರೆ.

Contact Your\'s Advertisement; 9902492681

ಅಧಿಕಾರಿಗಳು ಕಾರ್ಯಕ್ರಮ ನಡೆಯುವ ಸಮಯದಲ್ಲಿ ಗೈರು ಹಾಜರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಉದ್ದೇಶ ಪೂರ್ವಕವಾಗಿ ಹಿಂದುಳಿದ ಸಮಾಜದ ಶರಣರ ಜಯಂತಿ ಮಹೋತ್ಸವದಲ್ಲಿ ಜಿಲ್ಲಾ ಅಧಿಕಾರಿಗಳು ಗೈರು ಆಗಿರುವಂತದು. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತನಿಖೆ ನಡೆಸಿ ಜಿಲ್ಲಾ ಅಧಿಕಾರಿಗಳನ್ನು ಅಮಾನತುಗೊಳಿಸಿ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಶ್ರೀಗಳ ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here