ಶಹಾಬಾದÀ: ಉತ್ತಮ ವಿಟಮಿನ್‍ಗಳಿರುವ ಆಹಾರ ಪದಾರ್ಥಗಳನ್ನು ಮನೆಯಲ್ಲಿಯೇ ತಯಾರಿಸಿ ಉಪಯೋಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಿದೆ. ತಾಯಿ-ಮಗುವಿನ ಅಪೌಷ್ಟಿಕತೆ ನಿವಾರಣೆಗಾಗಿ ರಾಷ್ಟ್ರೀಯ ಪೆÇೀಷಣಾ ಅಭಿಯಾನ ನಡೆಯುತ್ತಿದ್ದು ಇದರ ಸದುಪಯೋಗಪಡಿಸಿಕೊಳ್ಳಿ ಎಂದು ನಗರಸಭೆಯ ಸದಸ್ಯೆ ಸಾಬೇರಾಬೇಗಂ ಹೇಳಿದರು.
ಅವರು ಪೆÇೀಷಣ ಅಭಿಯಾನ ಯೋಜನೆಯಡಿ ಸೆಪ್ಟೆಂಬರ್ ಮಾಸಾದ್ಯಂತ ಆಚರಿಸುವ ಪೆÇೀಷಣ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಶಹಾಬಾದ ಶಿಶು ಅಭಿವೃದ್ಧಿ ಯೋಜನೆಯ ನಗರದ ಲಕ್ಷ್ಮಿ ಗಂಜ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಖನಿಜಾಂಶ ಹೊಂದಿರುವ ಸೊಪ್ಪು, ತರಕಾರಿ ಜತೆ ಮೊಳಕೆ ಕಾಳು ಉಪಯೋಗಿಸುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು. ತಾಯಿ ಆರೋಗ್ಯವಾಗಿದ್ದಾಗ ಮಾತ್ರ ಆರೋಗ್ಯವಂತ ಶಿಶುವಿಗೆ ಜನ್ಮ ನೀಡಲು ಸಾಧ್ಯ ಎಂದರು.
ಅಂಗನವಾಡಿ ಮೇಲ್ವಿಚಾರಕಿ ಮೀನಾಕ್ಷಿ ಮಾತನಾಡಿ, ಯೋಜನೆಯಲ್ಲಿ ಮುಖ್ಯವಾಗಿ ಗರ್ಭಿಣಿಯರು, ಬಾಣಂತಿಯರು, ಶಿಶುವಿನ ಬೆಳವಣಿಗೆ ಕುಂಠಿತ, ತೂಕ ಕೊರತೆ, ರಕ್ತಹೀನತೆ, ಕಡಿಮೆ ತೂಕದ ಶಿಶು ಸೇರಿದಂತೆ ಅಪೌಷ್ಠಿಕತೆ ಸಮಸ್ಯೆಯಿಂದ ಬಳಲುತ್ತಿರುವವರ ಉತ್ತಮ ಆರೋಗ್ಯಕ್ಕಾಗಿ ಇಲಾಖೆ ನಾನಾ ಯೋಜನೆ ಜಾರಿಗೊಳಿಸಿದ್ದು, ಹಂತ ಹಂತವಾಗಿ ಅಪೌಷ್ಠಿಕತೆ ಮುಕ್ತ ಕರ್ನಾಟಕ ರೂಪಿಸಲು ಸನ್ನದ್ದವಾಗಿದೆ ಎಂದರು.
ಶಹಾಬಾದ ತಾಲ್ಲೂಕು ಸಂಯೋಜಕರಾದ ರೇಖಾ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಆರೈಕೆಗೆ ಸಂಬಂಧಿಸಿ ಮಾಹಿತಿನಿರಂತರವಾಗಿ ನೀಡಲಾಗುತ್ತಿದೆ. ಪೌಷ್ಟಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲರಿಗೂ ಜಾಗೃತಿ ಮೂಡಿಸಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅದನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಈ ಅಭಿಯಾನ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯಾದ ಅಮರಜಾ ಮತ್ತು ಅಂಗನವಾಡಿಯ ಎಲ್ಲಾ ಫಲಾನುಭವಿಗಳು ಉಪಸ್ಥಿತರಿದ್ದರು..