ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ವಸತಿ ಶಾಲೆಯೊಂದರಲ್ಲಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಸತಿ ಶಾಲೆಯ ಪ್ರಾಂಶುಪಾಲ ಚೇತನ ರೆಡ್ಡಿ ಹಾಗೂ ಕಂಪ್ಯೂಟರ್ ಆಪರೇಟರ್ ಸಂಗಮೇಶ ವಿರುದ್ಧ ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಜಾತಿನಿಂದನೆ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ.
ವಸತಿ ನಿಲಯದ ಪ್ರಾಂಶುಪಾಲ ಚೇತನರೆಡ್ಡಿ ಹಾಗೂ ಕಂಪ್ಯೂಟರ್ ಆಪರೇಟರ್ ಸಂಗಮೇಶ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ಮಾಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ವಿದ್ಯಾರ್ಥಿನಿಯರು ಊಟ ಮಾಡದೆ ಧರಣಿ ನಡಸಿದ್ದರು.
ಸುದ್ದಿ ತಿಳಿದು ತಹಶೀಲ್ದಾರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮತ್ತು ಡಿವೈಎಸ್ಪಿ ಸೇರಿ ಇತರರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲ ಚೇತನ ರೆಡ್ಡಿ ಮತ್ತು ಕಂಪ್ಯೂಟರ್ ಆಪರೇಟರ್ ಸಂಗಮೇಶ ವಿರುದ್ಧ ತಾಲ್ಲೂಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರಭುಲಿಂಗ ಅವರು ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ಪೋಸ್ಕೊ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯದಡಿ ದೂರು ಸಲ್ಲಿಸಿದ್ದರು.
ಈ ದೂರಿನ ಅನ್ವಯ ಇದೀಗ ವಸತಿ ನಿಲಯದ ಪ್ರಾಂಶುಪಾಲ ಚೇತನ ರೆಡ್ಡಿ ಮತ್ತು ಕಂಪ್ಯೂಟರ್ ಆಪರೇಟರ್ ಸಂಗಮೇಶ ಅವರನ್ನು ಪೊಲೀಸರು ಬಂಧಿಸಿದ್ದಾರೆ.