ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಪ್ರಯುಕ್ತ ಬೀದರ ಜಿಲ್ಲಾ ಕಸಾಪ ದ ಸಹಯೋಗದೊಂದಿಗೆ ಸೆ. ೧೮ ರಂದು ಬೀದರ ನಗರದ ಡಾ.ಚೆನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ನೀಟ್ ಪರೀಕ್ಷೆಯಲ್ಲಿ ೩೦೦ ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರುವ ಕಲ್ಯಾಣ ಕರ್ನಾಟಕ ವಿಭಾಗದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಭಿನಂದನಾ ಸಮಾರಂಭವನ್ನು ಅಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಆಸಕ್ತ ವಿದ್ಯಾರ್ಥಿಗಳು ಇದೇ ಸೆ.೧೬ ರೊಳಗಾಗಿ ಹತ್ತನೇ ಹಾಗೂ ನೀಟ್ ದೃಧೀಕೃತ ಅಂಕಪಟ್ಟಿಯೊಂದಿಗೆ ತಮ್ಮ ಹೆಸರು ನೋಂದಾಯಿಸಲು ಕೋರಲಾಗಿದೆ.
ವಿಶೇಷ ಸೂಚನೆ: ಕಲಬುರಗಿ ಜಿಲ್ಲೆಯಿಂದ ಭಾಗವಹಿಸುವ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ, ಪ್ರಯಾಣ ಭತ್ಯೆ ಹಾಗೂ ಬೀದರ ನಗರದ ಐತಿಹಾಸಿಕ ಸ್ಥಳಗಳ ವೀಕ್ಷನೆಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಸಾಪ ಬೀದರ ಅಧ್ಯಕ್ಷ ಸುರೇಶ ಚೆನ್ನಶೆಟ್ಟಿ – ಮೊ. ೯೯೮೬೭ ೯೨೩೨೩ಗೆ ಸಂಪರ್ಕಿಸಿ.