ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ:ವಿವಿಧ ಮೇಳಗಳ ಆಯೋಜನೆ

0
11

ಸುರಪುರ : ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಅಂಗವಾಗಿ ತಾಲೂಕಾಡಳಿತ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಲಕರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ನಾನಾ ಮೇಳಗಳನ್ನು ಆಯೋಜಿಸಲಾಯಿತು.

ಮೇಳವನ್ನು ಉದ್ಘಾಟಿಸಿದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರು ಮಾತನಾಡಿ, ೨೦೨೨-೨೩ನೇ ಸಾಲಿಗೆ ಕಲ್ಯಾಣ ಕರ್ನಾಟಕ ಪ್ರದೇಶವು ಸ್ವಾತಂತ್ರ್ಯ ಗಳಿಸಿ ೭೪ ವರ್ಷಗಳನ್ನು ಪೂರೈಸಿ ೭೫ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂದರ್ಭದಲ್ಲಿ ಸೆ.೧೭ ವಿಮೋಚನಾ ದಿನದ ಅಂಗವಾಗಿ ಈ ಮೇಳಗಳನ್ನು ಏರ್ಪಡಿಸಲಾಗಿದೆ. ಕಕ ಅಮೃತ ಮಹೋತ್ಸವದ ಭಾಗವಾಗಿ ಆರೋಗ್ಯ ಮೇಳ, ಉದ್ಯೋಗ ಮೇಳ, ಕೃಷಿ ಕಾರ್ಯಾಗಾರ, ಮಹಿಳಾ ಸಬಲೀಕರಣ ಕಾರ್ಯಾಗಾರ ಸೇರಿ ಇನ್ನಿತರ ಕಾರ್ಯಾಗಾರ ಆಯೋಜಿಸಲಾಗಿದೆ. ಎಲ್ಲ ಇಲಾಖೆಗಳು ಉತ್ತಮ ಸಹಕಾರ ನೀಡಿವೆ, ಒಂದೇ ಸ್ಥಳದಲ್ಲಿ ಆಯೋಜಿಸಿರುವ ಮೇಳಗಳು ಜನ ಸಮಾನ್ಯರಿಗೆ ಅತ್ಯಂತ ಉಪಯುಕ್ತವಾಗಿದ್ದು ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

Contact Your\'s Advertisement; 9902492681

ಕಾಲೇಜಿನ ಉಪ ಪ್ರಾಂಶುಪಾಲ ಯಲ್ಲಪ್ಪ ಕಾಡ್ಲೂರು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ, ಸಿಡಿಪಿಒ ಅನಿಲ್ ಕಾಂಬ್ಳೆ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗುರುನಾಥ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸುರೇಶ್ ಹಚ್ಚಡ್, ಪ್ರಭಾರಿ ಪ್ರಾಂಶುಪಾ ಸೋಫಿಸಾಬ್ ಗುತ್ತೇದಾರ್ ವೇದಿಕೆಯಲ್ಲಿದ್ದರು. ಸಂತೋಷ ಕುಮಾರ ಸ್ವಾಗತಿಸಿದರು. ಲಕ್ಷ್ಮಣ ಬಿರದಾರ್ ನಿರೂಪಿಸಿದರು. ಜೈರಾಂ ಚವ್ಹಾಣ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here