ಕಲಬುರಗಿ: ನಗರದ ಪೊಲೀಸ್ ಪರೇಡ್ ಮೈದಾನದ ರಸ್ತೆಯಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಲಬುರಗಿ ನಗರ ನೂತನ ಪೊಲೀಸ್ ಆಯುಕ್ತಾಲಯದ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಉದ್ಘಾಟಿಸುವರು.
ಮುಖ್ಯಮಂತ್ರಿಗಳಿಗೆ ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಂದ್ರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ಆರ್. ನಿರಾಣಿ ಅವರು ಸಾಥ್ ನೀಡಿದರು.
ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಸಂಸದ ಡಾ.ಉಮೇಶ ಜಾಧವ, ವಿಧಾನಸಭೆ ಶಾಸಕರುಗಳಾದ ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ (ಚಂದು ಪಾಟೀಲ), ಐ.ಜಿ.ಪಿ. ಮನಿಷ್ ಖರ್ಬಿಕರ್, ಡಿ.ಸಿ.ಯಶವಂತ ವಿ. ಗುರುಕರ್, ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಎಸ್.ಪಿ.ಇಶಾ ಪಂತ್ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.