ಕಲಬುರಗಿ: ಕೋಲಿ ಕಬ್ಬಲಿಗ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಆಗ್ರಹಿಸಿ ವಿವಿಧ ಹಂತದಲ್ಲಿ ಹೋರಾಟ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಕೋಲಿ ಕಬ್ಬಲಿಗ ಎಸ್ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ ತಿಳಿಸಿದರು.
ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿ ಅರೆ ಬೆತ್ತಲೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಪ್ರದಾನಿಗೆ ಮನವಿ ಸಲ್ಲಿಸಲಾಗಿದೆ. ಮೇಲಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲ್ಯಾಣ ಕರ್ನಾಟಕ ಉತ್ಸವದ ದಿನ ಕಲಬುರಗಿಗೆ ಆಗಮಿಸಿದ ವೇಳೆ ಮನವಿ ಸಲ್ಲಿಸಿದ್ದರೂ ಮೌನವಾಗಿ ತೆರಳಿರುವ ಕ್ರಮ ಖಂಡನಾರ್ಹ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪಿಂಟು ಜಮಾದಾರ, ಬಸವರಾಜ ಚಿನಮಳ್ಳಿ, ರಾಮಲಿಂಗ ಬಾನರ್, ಶಿವು ಯಾಗಾಪುರ, ಸತೀಶ ಜಮಾದಾರ, ಶರಣಪ್ಪ ನಾಟೀಕಾರ ಇತರರಿದ್ದರು.