ಕಲಬುರಗಿ: ಟಿಪ್ಪು ಜಯಂತಿ ಸರಕಾರದಿಂದ ಅಚರಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವ ಮೂಲಕ ಸರಕಾರ ಆದೇಶ ವಾಪಸ ಪಡೆಯಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಯಡಿಯೂರಪ್ಪ ಸರಕಾರ ಟಿಪ್ಪು ಜಯಂತಿ ಆಚರಿಸದನ್ನು ರದ್ದು ಪಡಿಸಿ ದ್ವೇಷದ ರಾಜಕೀಯ ನಡೆಸುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿ, ಸಿದ್ದರಾಮಯ್ಯ ಸರಕಾರ ಮತ್ತು ಕುಮಾರಸ್ವಾಮಿ ಮೈತ್ರಿ ಸರಕಾರ ಟಿಪ್ಪು ಜಯಂತಿಯನ್ನು ಆಚರಿಸಿ ಬಂದಿದ್ದಾರೆ ಆದರೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಪ್ರಮಾಣ ವಚನದ ಮೂರು ದಿನಗಳಲ್ಲಿ ಟಿಪ್ಪು ಜಯಂತಿಗೆ ಬ್ರೇಕ್ ಹಾಕುವ ಮೂಲಕ ದ್ವೇಷದ ರಾಜಕಾರಣ ನಡೆಸುವುದಲ್ಲದೆ ದೇಶ ಪ್ರೇಮಿ ಟಿಪ್ಪುಗೆ ಅವಮಾನ ಮಾಡಿದಂತಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಟಿಪ್ಪು ಈ ದೇಶಕ್ಕಾಗಿ ಹೋರಾಟ ಮಾಡಿ ತನ್ನ ಪ್ರಾಣವನ್ನು ದೇಶಕ್ಕಾಗಿ ಬಲಿದಾನ ನೀಡಿದ್ದಲ್ಲದೇ ದೇಶದ ಅಭಿವೃದ್ಧಿ ಹಾಗೂ ಸಮಾನತೆಗೆ ಹಕ್ಕಿಗಾಗಿ ಮಾದರಿಯ ರಾಜ ನಾಗಿದ್ದ ಎಂದು ತಿಳಿಸಿದರು. ಕೂಡಲೇ ಯಡಿಯೂರಪ್ಪ ತಮ್ಮ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದಲಿತ ಸಂಘಟನೆ, ಪ್ರಗತಿಪರ ಸಂಘಟನೆ ಹಾಗೂ ಮುಸ್ಲಿಂ ಸಂಘಟನೆ ಮುಖಂಡರು ಸೇರಿದಂತೆ ವಿವಿಧ ಸಂಸ್ಥೆಯ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದರು.