ಕಲಬುರಗಿ: ಬಾಲ್ಯವಿವಾಹ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ಅವರು ಸೂಚಿಸಿದರು.
ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ, ಮುಖ್ಯಮಂತ್ರಿ ಬಾಲಸೇವಾ ಯೋಜನೆ ಮತ್ತು ಪಿ.ಎಮ್.ಕೇರ್ಸ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಹಾಗೂ ಮಕ್ಕಳ ಸಹಾಯವಾಣಿ ಸಲಹಾ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯವಿವಾಹ ಪ್ರಕರಣಗಳನ್ನ ಸಂಬಂಧಿಸಿದಂತೆ ಮಾಹಿತಿ ಅಧಿಕಾರಿಗಳಿಂದ ಜಿಲ್ಲೆಯಲ್ಲಿ ಒಟ್ಟು ಎಷ್ಟು ಪ್ರಕರಣಗಳ ದಾಖಲಾಗಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು 2021-22 ನೇ ಸಾಲ್ಲಿನಲ್ಲಿ ಒಟ್ಟು 14 ಪ್ರಕರಣಗಳಲ್ಲಿ ಒಟ್ಟು 9 ಪ್ರಕರಣಗಳನ್ನು ದಾಖಲಾಗಿದ್ದು, ಅವರಿಗೆ ಪ್ರತಿಯೊಬ್ಬರಿಗೆ ರೂ.5000 ನೀಡಿದ್ದೇವೆ. ಅದರಲ್ಲಿ ಇನ್ನೂ 5 ಪ್ರಕರಣಗಳು ಬಾಕಿ ಇವೆ ಎಂದು ಸಭೆಯ ಗಮನಕ್ಕೆ ತಂದರು.
2022-23ನೇ ಸಾಲಿನ ಒಟ್ಟು 5 ಪ್ರಕರಣಗಳಲ್ಲಿ 3 ಪ್ರಕರಣಗಳನ್ನು ದಾಖಲಾಗಿದ್ದು, ಅದರಲ್ಲಿ ಇನ್ನೂ 2 ಪ್ರಕರಣಗಳನ್ನು ಬಾಕಿ ಇವೆ ಎಂದು ಮಹಿಳಾ ಮತ್ತು ರಕ್ಷಣಾಧಿಕಾರಿ ಮಲ್ಲಣ್ಣಾ ದೇಸಾಯಿ ಸಭೆಯ ಗಮನಕ್ಕೆ ತಂದರು.
ಪ್ರಸ್ತುತ ಕಲಬುರಗಿ ಜಿಲ್ಲೆಯ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಸರಕಾರಿ ಪಾಲನ ಸಂಸ್ಥೆಗಳ ವಿವರಗಳನ್ನು ಸರಕಾರಿ ಬಾಲಕ-ಬಾಲಕಿ ಬಾಲಮಂದಿರ, ಬುದ್ದಿಮಾಂದ್ಯ, ಸರಕಾರಿ ವೀಕ್ಷಣಾಲಯ, ಅಮೂಲ್ಯ ಶಿಶುಗೃಹ ಒಟ್ಟು ಮಂಜೂರಾಗಿರುವ ಒಟ್ಟು ಮಕ್ಕಳ ಸಂಖ್ಯೆ 310 ಇವೆ ಎಂದು ಅಧಿಕಾರಿಗಳಿಂದ ಮಾಹಿತಿ ಸಭೆಗೆ ನೀಡಿದರು.
ಜಿಲ್ಲೆಯಲ್ಲಿ ಭೀಕ್ಷಾಟನೆ, ಚಿಂದಿ ಆಯುವ ಹಾಗೂ ಬಾಲಕಾರ್ಮಿಕ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ, ಅಪರೇಷನ್ ಮುಸ್ಕಾನ್ ಪತ್ತೆದಾಳಿ ಕಾರ್ಯಚಾರಣೆ ಹಮ್ಮಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲೆಯಲ್ಲಿ ಒಟ್ಟು 3098 ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಹಾಯವಾಣಿ-1098, ಗೊಡೆಬರಹ ಬರೆಸುವುದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಪಂಚಾಯತ್ ರಾಜ್,ಗೊಡೆಬರಹ ಬರೆಸಬೇಕು ಹಾಗೂ ಸಾರಿಗೆ ಇಲಾಖೆ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಮಕ್ಕಳ ಸಹಾಯವಾಣಿ 1098 ಆಡಿಯೋ ಅನೌನ್ಸಮೆಂಟ್ ಬಿತ್ತರಿಸುವುದರ ಬಗ್ಗೆ ಅಧಿಕಾರಿಗಳಿಂದ ಚೈಲ್ಡ್ ಲೈನ್ 1098 ವ್ಯಾಪಕ ಪ್ರಚಾರ ಕುರಿತು ಮಾಹಿತಿ ಪಡೆದರು.
ಪ್ರತಿ ಜಿಲ್ಲೆಯಲ್ಲಿ ತಾಲೂಕ ಗ್ರಾಮಗಳಲ್ಲಿ ಅಧಿಕಾರಿಗಳು ಸಭೆಯನ್ನು ಮಾಡಬೇಕೆಂದು ತಿಳಿಸಿದರು. ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ ಎಮ್ ಚೌಗಲೆ, ಮಾತನಾಡಿ, ಅನೇಕ ಮಕ್ಕಳ ಹೆಸರು ಅಥವಾ ತಂದೆ ಹೆಸರು ಸರಿಯಾಗಿ ನಮೂದು ಆಗಿರುವುದಿಲ್ಲ. ಕಡ್ಡಾಯವಾಗಿ ಅವರು ಹೆಸರಗಳನ್ನು ಸರಿಯಾಗಿ ಪರಿಶೀಲಿಸಿಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ ಮಾಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ ಯು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.