ಕಲಬುರಗಿ: ಪರಹತಬಾದ ಗ್ರಾಮದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಪದವಿ ಮಹಾವಿದ್ಯಾಲಯ ಪ್ರಾಚಾರ್ಯರಾದ ಇಂದುಮತಿ ಪಾಟೀಲ ಉದ್ಘಾಟಿಸಿದರು.
ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಕಾಲೇಜುಗಳು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಸಾಮಾಜಿಕ ಪರಿವರ್ತನೆ ಮಾಡಬೇಕು. ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಕಡಿಮೆ ಖರ್ಚಿನಲ್ಲಿ ಉನ್ನತ ಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಬಾಳಿಗೆ ಬೆಳಕಾಗಿ, ಕಲಿಕೆಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಅವರಲ್ಲಿ ವೈಜ್ಞಾನಿಕ ಮನೋಭಾವ ಬೇಳೆಸುವುದು ಮತ್ತು ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಂಡು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಬಾಳಿಗೆ ಬೆಳಕಾಗಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಪ್ರಭಾವತಿ, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಪ್ರತಿನಿಧಿ (ಎನ್‍ಜಿಓ) ಹಾಗೂ ಉಪನ್ಯಾಸಕ ಧರ್ಮರಾಜ ಜವಳಿ, ಎಚ್ ಎನ್ ಪಾಟೀಲ, ವಿಶ್ವನಾಥ ಹೊಸಮನಿ, ರಾಮಚಂದ್ರ ಹಕ್ಕಿ, ಕು.ಮಮತಾ ಎಚ್ ಆರ್ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ತಿಪ್ಪಾರೆಡ್ಡಿ ವಹಿಸಿದ್ದರು. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.