ಕಲಬುರಗಿ: ಪ್ರಸಕ್ತ 2022-23ನೇ ಸಾಲಿಗೆ ಕೇಂದ್ರ ಸರ್ಕಾರದ ನ್ಯಾಷನಲ್ ಇ–ಸ್ಕಾಲರ್ಶಿಪ್ ಯೋಜನೆಯಡಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಮೆಟ್ರಿಕ್ ನಂತರದ/ಉನ್ನತ ದರ್ಜೆಯ ಶಿಕ್ಷಣ ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಕೆಳಕಂಡಂತೆ ವಿಸ್ತರಿಸಲಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2022ರ ಅಕ್ಟೋಬರ್ 15 ರವರೆಗೆ ಹಾಗೂ ಮೆಟ್ರಿಕ್ ನಂತರದ/ಉನ್ನತ ದರ್ಜೆಯ ಶಿಕ್ಷಣ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವನ್ನು 2022ರ ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-235222ಗೆ ಸಂಪರ್ಕಿಸಲು ಕೋರಲಾಗಿದೆ.