ಧಾರ್ಮಿಕ ಕಾರ್ಯಕ್ರಮಗಳು ಉತ್ತಮ ಸಂಸ್ಕಾರ ನೀಡುತ್ತವೆ

0
321

ಕಲಬುರಗಿ: ಧಾರ್ಮಿಕ ಕಾರ್ಯಕ್ರಮಗಳು ಭಾವೈಕ್ಯತೆಗೆ, ಉತ್ತಮ ಸಂಸ್ಕಾರಕ್ಕೆ ಸಾಕ್ಷಿ ಹಾಗೂ ನಮ್ಮೆಲ್ಲರ ಪ್ರಗತಿಯ ಪ್ರತಿರೂಪ.

ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ್ ಬಡಾವಣೆಯಲ್ಲಿ ನವರಾತ್ರಿಯ ಪ್ರಯುಕ್ತ ಅಂಬಾಭವಾನಿ ಪ್ರತಿಮೆ ಪ್ರತಿಷ್ಠಾಪನೆ ಮಾಡಿ ಪ್ರತಿ ದಿನ ದೇವಿಗೆ ಒಂದೊಂದು ಅವತಾರದಲ್ಲಿರಿಸಿ 9ದಿನ ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

Contact Your\'s Advertisement; 9902492681

ಭಾನುವಾರ ಬೆಳಿಗ್ಗೆ ನುರಿತ  ತಂಡದಿಂದ ಗೀಗಿ ಪದ, ಭಜನೆಯೊಂದಿಗೆ ವಿಶೇಷ ಪೂಜೆ ನಡೆಯಿತು. ಸಾಯಂಕಾಲ ದೇವಿಯ ಪಲ್ಲಕ್ಕಿ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಹಬ್ಬದ ಪ್ರಯುಕ್ತ ಮಹಿಳೆಯರು ಹಾಗೂ ಮಕ್ಕಳು ಹೊಸ ಬಟ್ಟೆ ತೊಟ್ಟು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆ ಮುಂಚೂಣಿಯಲ್ಲಿದ್ದ ವಾದ್ಯ ಮೇಳದವರ ವಾದನಕ್ಕೆ ಬಡಾವಣೆಯ ಭಕ್ತಾದಿಗಳು ನೃತ್ಯ ಮಾಡಿ ಗಮನ ಸೆಳೆದರು.

ಈ ಸಂದರ್ಭದಲ್ಲಿ ಬಡಾವಣೆಯ ಅದ್ಯಕ್ಷ ಸಂಜೀವಕುಮಾರ ಶೆಟ್ಟಿ ಮಾತನಾಡಿ ಸಮಾಜದೆಲ್ಲೆಡೆ ಆಧ್ಯಾತ್ಮಿಕ, ಧಾರ್ಮಿಕ, ಸಾಹಿತ್ಯಿಕ ಕಾರ್ಯಕ್ರಮಗಳನ್ನು ಹೆಚ್ಚೆಚ್ಚು ನಡೆಸಿ ಯುವ ಸಮೂಹವನ್ನು ಜಾಗೃತಗೊಳಿಸಬೇಕಿದೆ. ಧಾರ್ಮಿಕ ಕಾರ್ಯಕ್ರಮಗಳು  ಸಮಾಜವನ್ನು ಒಗ್ಗೂಡಿಸುವುದರ ಜೋತೆಗೆ ಜನರಿಗೆ ಉತ್ತಮ ಸಂಸ್ಕಾರವನ್ನು ನೀಡುತ್ತವೆ ಎಂದರು. ದೇವಿಯ ಮೆರವಣಿಗೆಯಲ್ಲಿ ಕ್ಷೇಮಾಭಿವೃದ್ಧಿ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಬಡಾವಣೆಯ ಎಲ್ಲಾ ನಿವಾಸಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here