ಮೈಸೂರು ರೈಲ್ವೆ ನಿಲ್ದಾಣಕ್ಕೆ ಡಿ. ದೇವರಾಜ ಅರಸು ಹೆಸರಿಡಲು ಒತ್ತಾಯ

0
67

ಮೈಸೂರು: ಮೈಸೂರು ರೈಲ್ವೆ ನಿಲ್ದಾಣಕ್ಕೆ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಹೆಸರಿಡಬೇಕೆಂದು ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಪಿಯೂಷ್ ಘೋಯಲ್ ಗೆ ಒತ್ತಾಯಿಸಿದ್ದಾರೆ.

ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯ ಅಧ್ಯಕ್ಷರಾದ ಜಾಕೀರ್ ಹುಸೇನ್, ಮೈಸೂರು ಮಹಾನಗರ ಪಾಲಿಕೆ ಮಾಜಿ ಮಹಾಪೌರರು ಪುರುಷೋತ್ತಮ್, ಎನ್.ಎಸ್.ಯು.ಐ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಪ್ರಶಾಂತ್ ಆರ್ಯ,  ದಲಿತ ಪ್ರಗತಿಪರ ಒಕ್ಕೂಟಗಳ ಸಂಚಾಲಕರಾದ ಪಿ. ರಾಜು, ಅರವಿಂದ ಶರ್ಮ, ರದಿವುಲ್ಲ ಖಾನ್ ಸೇರಿದಂತೆ ಹಲವರ ನಿಯೋಗ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಮೈಸೂರು ದಸರಾ ಹಬ್ಬವನ್ನು ನಾಡಹಬ್ಬವೆಂದು ಅಧಿಕೃತವಾಗಿ ಘೋಷಣೆ ಮಾಡಿದ ಕೀರ್ತಿ ದಿವಂಗತ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಇಷ್ಟೆಲ್ಲಾ ರಾಜಕೀಯ ಮತ್ತು ಸಾಮಾಜಿಕ ಬದ್ಧತೆಯುಳ್ಳ ಆದರ್ಶ ವ್ಯಕ್ತಿಯಾದ ಮಾಜಿ ಮುಖ್ಯಮಂತ್ರಿಗಳು ದಿ. ಡಿ. ದೇವರಾಜ ಅರಸು ಅವರನ್ನು ನಾವೆಲ್ಲರು ಸ್ಮರಸಿಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ಮತ್ತು ಸಾಂಸ್ಕೃತಿಕ ನಗರಿ ಮೈಸೂರು ಜನತೆ ಈ ಮಹಾನ್ ವ್ಯಕ್ತಿಯ ಹೆಸರು ಸ್ಥಿರಸ್ಥಾಯಿಯಾಗಿ ಉಳಿಯುವ ನಿಟ್ಟಿನಲ್ಲಿ ಮೈಸೂರು ರೈಲ್ವೆ ನಿಲ್ದಾಣಕ್ಕೆ ಅವರ ಹೆಸರನ್ನು ನಾಮಕರಣ ಮಾಡುವುದರ ಮೂಲಕ ಅವರಿಗೆ ಸಲ್ಲಿಸುವ ಹೃತ್ಪೂರ್ವಕ ಗೌರವವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here