ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಮನವಿ

0
16

ಸುರಪುರ:ತಾಲೂಕಿನ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸರಕಾರ ನೀಡಬೇಕಾದ ಪ್ರೋತ್ಸಾಹ ಧನವನ್ನು ಸರಕಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ಸರಕಾರ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಿರುವ ಪ್ರೋತ್ಸಾಹ ಧನದ ಬಿಡುಗಡೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈಗಾಗಲೇ ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಬಿಡುಗಡೆಯಲ್ಲಿ ಸರಕಾರ ತಾರತಮ್ಯ ಮಾಡುತ್ತಿದೆ ಎಂದರು.

Contact Your\'s Advertisement; 9902492681

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶೇ 100 ರಷ್ಟು ಹಣ ಬಿಡುಗಡೆ ಮಾಡಿದ್ದು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿ ಶೇ 50 ರಷ್ಟು ಮಾತ್ರ ಹಣ ನೀಡಿ ತಾರತಮ್ಯ ಎಸಗುತ್ತಿದೆ ಎಂದರು.ಅಲ್ಲದೆ ಕೂಡಲೇ ಎಲ್ಲಾ ವಿದ್ಯಾರ್ಥಿಗಳಿಗೆ ಶೇ 100 ರಷ್ಟು ಹಣವನ್ನು ಬಿಡುಗಡೆ ಮಾಡಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಉಪ ತಹಸೀಲ್ದಾರ್ ಮೂಲಕ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಗಂಗಾಧರ ನಾಯಕ ತಿಂಥಣಿ,ಕಾರ್ಯಾಧ್ಯಕ್ಷ ರಮೇಶ ದೊರೆ ಆಲ್ದಾಳ,ಪ್ರ.ಕಾರ್ಯದರ್ಶಿ ವೆಂಕಟೇಶ ಬೇಟೆಗಾರ,ಕರವೇ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ,ಭೀಮು ನಾಯಕ ಮಲ್ಲಿಬಾವಿ ಸೇರಿದಂತೆ ಕರವೇ ವಿದ್ಯಾರ್ಥಿ ಘಟಕದ ಮುಖಂಡರು ಸೇರಿ ಅನೇಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here