ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಜಾಗೃತಿ ಅವಶ್ಯ: ರಿಯಾಜ್

0
16

ಸುರಪುರ:ಬಾಲಕಾರ್ಮಿಕ ಪದ್ದತಿ ಸಂಪೂರ್ಣ ನಿರ್ಮೂಲನೆಯಾಗಲು ಸರ್ವರಲ್ಲು ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯವಾಗಿದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಿಯಾಜ ಪಟೇಲ್ ವರ್ಕನಳ್ಳಿ ಹೇಳಿದರು.

ರಂಗಂಪೇಟೆಯ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಬಾಲ ಕಾರ್ಮಿಕ ಯೋಜನೆ ಹಾಗೂ ಕಾರ್ಮಿಕ ಇಲಾಖೆ ಮತ್ತು ಬಸವಪ್ರಭು ವಿದ್ಯಾವರ್ಧಕ ಸಂಸ್ಥೆ ಸಹಯೋಗದೊಂದಿಗೆ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಜನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Contact Your\'s Advertisement; 9902492681

14 ವರ್ಷದ ಒಳಗಿನ ಅನೇಕ ಜನ ಮಕ್ಕಳನ್ನು ಕಾರ್ಮಿಕರನ್ನಾಗಿ ದುಡಿಸಿಕೊಳ್ಳುವುದು ಅಪರಾಧವಾಗಿದ್ದು, ಆ ದಿಶೇಯಲ್ಲಿ ಜಾಗೃತಿ ಮೂಡಿಸುವ ಮತ್ತು ಹಂತವರಿಗೆ ಶಿಕ್ಷಣ ಕೋಡಿಸುವ ಜವಬ್ದಾರಿ ಪ್ರತಿಯೊಬ್ಬರಮೇಲಿದೆ. ಗ್ರಾಮೀಣ ಪ್ರದೇಶದಲ್ಲಿ ಅತೀಯಾದ ಬಡತನ, ಮೌಡ್ಯತೆ, ಅನಕ್ಷರತೆ ಸೇರಿದಂತೆ ನಾನಾ ಕಾರಣಗಳಿಂದ ಬಾಲ ಕಾರ್ಮಿಕ ಪದ್ದತಿ ಜಿವಂತವಿದ್ದು, ಇದನ್ನು ಸಂಪೂರ್ಣ ನಿರ್ಮೂಲನೆಮಾಡಲು ಸರ್ವಕ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನೆಳ್ಳಿ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಬಲಭೀಮ ಪಾಟೀಲ್, ಮಾನಯ ರುಕ್ಮಾಪೂರ, ಶ್ರೀಕಾಂತ ರತ್ತಾಳ, ಯಲ್ಲಪ ಕುಪಗಲ್ ಸೇರಿದಂತೆ ಇತರರಿದ್ದರು. ಸಲೀಂ ಪಟೇಲ್ ನಿರೂಪಿಸಿ ವಂದಿಸಿದರು ಇದೆ ಸಂದರ್ಭದಲ್ಲಿ ಜಾಗೃತಿ ಕುರಿತಾದ ಬಿತ್ತಿ ಪತ್ರಗಳನ್ನು ಬಿಡುಗಡೆಗೋಳಿಸುವ ಜೊತೆಗೆ ವಿದ್ಯಾರ್ಥಿಗಳಿಗೆ ಜಾಗೃತಿ ಪತ್ರವನ್ನು ವಿತರಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here