ಕಟ್ಟಡ ಮತ್ತು ಇತರೆ ಕಾರ್ಮಿಕರ ಅನುಕೂಲಕ್ಕಾಗಿ ನೂತನ ತಂತ್ರಾಂಶ

0
10

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಣಿ, ನವೀಕರಣ ಹಾಗೂ ವಿವಿಧ ಸೌಲಭ್ಯಗಳ ಕುರಿತು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿತ್ತು, ಇದೀಗ ಕಾರ್ಮಿಕರ ಅನುಕೂಲಕ್ಕಾಗಿ ನೂತನ ತಂತ್ರಾಂಶವನ್ನು ಸಿದ್ಧಪಡಿಸಲಾಗಿದ್ದು, ಈಗಾಗಲೇ ಮುಖ್ಯಮಂತ್ರಿಗಳು ನೂತನ ತಂತ್ರಾಂಶಕ್ಕೆ ಚಾಲನೆ ನೀಡಿರುತ್ತಾರೆ.

2022 ಅಕ್ಟೋಬರ್ 20 ರಿಂದ ಸೇವಾಸಿಂಧು ತಂತ್ರಾಂಶದ, ಮಂಡಳದ ನೋಂದಣಿ, ನವೀಕರಣ ಹಾಗೂ ವಿವಿಧ ಸೌಲಭ್ಯಗಳ ಕುರಿತು ಅರ್ಜಿಗಳ ಸ್ವೀಕೃತಿಯನ್ನು ಸ್ಥಗಿತಗೊಳಸಲಾಗುವುದು. ಇನ್ನು ಮುಂದೆ ನೂತನ ಕಾರ್ಮಿಕರ ಕಾರ್ಡ್‍ಗೆ ಅರ್ಜಿ ಸಲ್ಲಿಸಲು ಹಿರಿಯ ಕಾರ್ಮಿಕ ನಿರೀಕ್ಷಕರು / ಕಾರ್ಮಿಕ ನಿರೀಕ್ಷಕರ ಕಛೇರಿಗೆ ಭೇಟಿ ನೀಡುವುದು.

Contact Your\'s Advertisement; 9902492681

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಫಲಾನುಭವಿಗಳು  https://kbocwwb.karnataka.gov.in   ರಲ್ಲಿAlready Registered Construction Workers  ಟ್ಯಾಬ್ ಮೂಲಕ ಮಾಹಿತಿಯನ್ನು ಪೂರ್ಣಗೊಳಿಸುವಾಗ ಆಧಾರ್ ನಮೂದಿಸಿರುವ Mobile Number  ಅನ್ನು ಮಾತ್ರ Update ಮಾಡಬೇಕಾಗುತ್ತದೆ.

ತದನಂತರ ಕಾರ್ಡ್ ಅನ್ನು ಫಲಾನುಭವಿಗಳ ಪ್ರಸ್ತುತ Validity ಗೆ ಪಡೆಯಬಹುದಾಗಿದೆ ಹಾಗೂ ಕಾರ್ಡ್ ಪಡೆದ ಫಲಾನುಭವಿಗಳು ಮಾತ್ರ ಮಂಡಳಿಯ ವಿವಿಧ ಸೌಲಭ್ಯಗಳನ್ನು ಪಡೆಯಲು ಅವಕಾಶವಿರುತ್ತದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here