ಕಲಬುರಗಿ: ಭಾರತ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಸೋನಿಯಾ ಗಾಂಧಿ ಡಾ. ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಹೊಂದಿರುವ ಅವರ ಭಾವಚಿತ್ರವನ್ನು ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರಾದ ನಾಗಭೂಷಣ ಹರಳಕಟ್ಟಿ ಅವರು ಗೌರವಪೂರ್ವಕವಾಗಿ ಉಡುಗೊರೆಯನ್ನಾಗಿ ನೀಡಿದರು.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಅಂದಿನ ಕಾಂಗ್ರೆಸ್ ಸರ್ಕಾರ ಸಂವಿಧಾನದ ಆರ್ಟಿಕಲ್ 371 (ಜೆ) ಜಾರಿಗೆ ತರುವ ಮೂಲಕ ಈ ಭಾಗದ ಯುವಕರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ ಅನುಕೂಲ ಮಾಡಿಕೊಟ್ಟಿದ ಈ ಐತಿಹಾಸಿಕ ತೀರ್ಮಾನದ ಹಿಂದಿನ ರೂವಾರಿಗಳಾದ ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೇ ಅವರ ಪರಿಶ್ರಮ ಹಾಗೂ ಈ ಭಾಗದ ಬಗ್ಗೆ ಅವರಿಗೆ ಇರುವ ಬದ್ಧತೆ ಮತ್ತು ಕಾಳಜಿಯನ್ನು ಯಾರೂ ಅಲ್ಲಗಳೆಯಲಾಗದು. ಜೊತೆಗೆ ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಅವರ ಮಾರ್ಗದರ್ಶನ ಮತ್ತು ಸಲಹೆ ಅವಿಸ್ಮರಣೀಯ. ವಾಗಿದೆ ಎಂದು ತಿಳಿಸಿದರು.