ಸುರಪುರ: ಮೈಸೂರ ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿಯ ದಲಿತರಿಗೆ ಸ್ಮಶಾನ ಭೂಮಿ ಒದಗಿಸಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಬಣ ರಹಿತ ಸಂಘಟನೆಯಿಂದ ಮನವಿ ಸಲ್ಲಿಸಲಾಯಿತು.
ನಗರದ ತಹಸೀಲ್ದಾರ್ ಕಚೇರಿ ಮುಂದೆ ಜಮಾಯಿಸಿದ ಸಂಘಟನೆ ಮುಖಂಡರ ಉದ್ದೇಶಿಸಿ ಸಂಘಟನೆ ಜಿಲ್ಲಾಧ್ಯಕ್ಷ ಭೀಮು ಹುಲಕಲ್ ಮಾತನಾಡಿ,ಮೈಸೂರು ಜಿಲ್ಲೆಯ ತಿ.ನರಸೀಪುರ ತಹಸೀಲ್ದಾರ್ ಕಚೇರಿ ಮುಂದೆ ನಮ್ಮ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸುವಾಗ ಅಲ್ಲಿಯ ತಹಸೀಲ್ದಾರರು ನಮ್ಮ ಬೇಡಿಕೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸುವುದಾಗಿ ಭರವಸೆ ನೀಡಿ ನಂತರ ನಿರ್ಲಕ್ಷಿಸಿದ್ದು,ಮೈಸೂರು ಜಿಲ್ಲಾಧಿಕಾರಿಗಳು ಕೂಡಲೇ ತಿ.ನರಸೀಪುರ ತಹಸೀಲ್ದಾರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ತಿ.ನರಸೀಪುರ ತಾಲೂಕಿನಲ್ಲಿಯ ಎಲ್ಲಾ ಗ್ರಾಮಗಳ ದಲಿತರಿಗೆ ಸ್ಮಶಾನ ಭೂಮಿ ಒದಗಿಸುವ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಕಚೇರಿ ಸಿರಸ್ತೆದಾರ ಮೂಲಕ ಸರಕಾರಕ್ಕೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ತಿಪ್ಪಣ್ಣ ಪಾಟೀಲ್,ವಿನೋದ,ಯಮುನೇಶ,ಇಮ್ತಿಯಾಜ್,ಸೈಯದ್,ಮೈನೊದ್ದೀನ್ ಸೇರಿದಂತೆ ಅನೇಕರಿದ್ದರು.