ಕಲಬುರಗಿ: ಮಕ್ಕಳ ಹಕ್ಕು ಮತ್ತು ಮಕ್ಕಳ ಸಂರಕ್ಷಣೆಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮಸಭೆ ಏರ್ಪಡಿಸಬೇಕೆಂದು ಅಭಿವೃದ್ಧಿ ಅಧಿಕಾರಿಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ ಎಮ್. ಚೌಗಲೆ ಹೇಳಿದರು.
ಶನಿವಾರದಂದು ನಗರದ ಜಿಲ್ಲಾ ಪಂಚಾಯತ ನೂತನ ಸಭಾಗೃಹದಲ್ಲಿ ಆಯೋಜಿಸಿದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯುನಿಸೆಫ್ ಮತ್ತು ಮಕ್ಕಳ ಸಹಾಯವಾಣಿ-1098 ಇವರುಗಳ ಸಂಯುಕ್ತಾಶ್ರದಲ್ಲಿ “ಕ್ರೀಯಾಶೀಲ ಮಕ್ಕಳ ಗ್ರಾಮಸಭೆ ಅನುಷ್ಠಾನ, ಮಕ್ಕಳ ಹಕ್ಕುಗಳು ಮತ್ತು ಸಂರಕ್ಷಣೆಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ಸಾಮಥ್ರ್ಯ ಅಭಿವೃದ್ಧಿ ತರಬೇತಿ” ಸಸಿಗೆ ನೀರೆರೆಯುವ ಮೂಲಕ ಉದ್ಫಾಟಿಸಿ ಮಾತನಾಡಿದರು.
ಮಕ್ಕಳ ಹಕ್ಕುಗಳ ಅನುಷ್ಠಾನ ಮಕ್ಕಳ ಸಂರಕ್ಷಣೆ ಮತ್ತು ಮಕ್ಕಳ ಅಭಿವೃದ್ಧಿ ಇದು ಒಂದು ರಾಷ್ಟ್ರೀಯ ಕಾರ್ಯಕ್ರಮ ಆಗಿದ್ದು, ಮಕ್ಕಳಿಗೆ ಸಂರಕ್ಷಣೆಗಾಗಿ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ ಇದನ್ನು ಸದುಪಯೋಗ ಪಡೆದು ಕೊಳ್ಳಬೇಕೆಂದರು.
ಮಕ್ಕಳ ಹಕ್ಕುಗಳ ಗ್ರಾಮಸಭೆಯನ್ನು ತಿಂಗಳಲ್ಲಿ ಒಂದು ದಿನಕ್ಕೆ ಸೀಮಿತಗೊಳಿಸದೆ ಮಕ್ಕಳ ಹಕ್ಕು, ಮಕ್ಕಳ ಸಂರಕ್ಷಣೆ ಮತ್ತು ಮಕ್ಕಳ ಅಭಿವೃದ್ಧಿ ಅಂಶಗಳ ಗುರಿ ಸಾಧಿಸಲು ಪಂಚಾಯಿತಿಯ ಆಯೋಜಿಸುವ ವಾರ್ಷಿಕ ಕ್ರಿಯಾ ಯೋಜನಾ ಸಭೆ, ಈ ಸಭೆಯ ಪ್ರಮುಖವಾಗಿ ಆಯಾ ಪಂಚಾಯಿತಿ ವ್ಯಾಪ್ತಿಗೆ ಮಕ್ಕಳಿಗೆ ಅವರ ಅಭಿಪ್ರಾಯ ಹಾಗೂ ಭಾಗವಹಿಸುವಿಕೆ ಮನ್ನಣೆ, ಪ್ರಾಶಸ್ತ್ಯ ನೀಡಿ ಅವರ ಅಹವಾಲುಗಳನ್ನು ಮಕ್ಕಳ ಅಭಿವೃದ್ಧಿ ಕ್ರಿಯಾ ಯೋಜನೆ ಕಾರ್ಯಕ್ರಮ ಇದು ಆಗಿದೆ ಎಂದು ತಿಳಿಸಿದರು.
ಮಕ್ಕಳು ಅವರ ಸಮಸ್ಯೆಗಳಿಗೆ ಸ್ಪಂಧಿಸಬೇಕು ಶಾಲೆಗಳಿಂದ ದೂರ ಉಳಿದ ಮಕ್ಕಳಿಗೆ ಶಾಲೆ ಕರೆ ತರುವ ಪ್ರಯತ್ನ ಮಾಡಬೇಕು.ಮಕ್ಕಳ ಹಕ್ಕುಗಳ ಅನುಷ್ಠಾನ ಮತ್ತು ಮಕ್ಕಳ ಸಂರಕ್ಷಣೆಯ ಕಾರ್ಯ ಇದನ್ನು ಸಹಕಾರಗೊಳಿಸುವ ಪ್ರಮುಖ ಕಾರ್ಯಕ್ರಮವೇ ಮಕ್ಕಳ ಹಕ್ಕುಗಳ ಗ್ರಾಮಸಭೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ದಿಲೀಪ ಬದೋಲೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಆಯೋಜಿಸಲು ಗ್ರಾಮ ಪಂಚಾಯಿತಿಗೊಂದು ಮಾಗದರ್ಶಿ ಕೈಪಿಡಿ ಹಾಗೂ ಮಕ್ಕಳ ಹಕ್ಕು ಮತ್ತು ಸಂರಕ್ಷಣೆಗಾಗಿ ಸರ್ಕಾರದಿಂದ ಪ್ರಮುಖ ಸುತ್ತೋಲೆಗಳನ್ನು ಹೊರಡಿಸಿದೆ. ಮಕ್ಕಳ ಹಕ್ಕುಗಳ ಮತ್ತು ಮಕ್ಕಳ ಅಭಿವೃದ್ಧಿಯ ಗುರಿಗಳನ್ನು ಸಾಧಿಸುವುದು ಗ್ರಾಮ ಪಂಚಾಯತ್ ಪ್ರಾಥಮಿಕ ಕರ್ತವ್ಯ, ಹೊಣೆ ಮತ್ತು ಜವಾಬ್ದಾರಿಯಾಗಿರುತ್ತದೆ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನವೀನಕುಮಾರ ಯು ಮಾತನಾಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಣ ದೇಸಾಯಿ ಸ್ವಾಗತಿಸಿದರು. ಕೊಪ್ಪಳ ಮಕ್ಕಳ ರಕ್ಷಣಾ ಯೋಜನೆ ಯುನಿಸೆಫ್ ಸಂಯೋಜಕ ರಾಘವೇಂದ್ರ ಭಟ್. ಯುನಿಸೆಫ್ ಸಂಯೋಜಕರಾದ ಹರೀಶ ಜೋಗಿ ಸೇರಿದಂತೆ ಎಲ್ಲಾ ತಾಲೂಕಿನ ಅಭಿವೃದ್ಧಿ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದರು.