ಕಲಬುರಗಿ: ರಾಷ್ಟ್ರೀಯ ವೃತ್ತಿ ಸೇವೆ ಯೋಜನೆಯಡಿ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ 2022ರ ನವೆಂಬರ್ 3 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಕಲಬುರಗಿಯ ಫ್ಲೀಪ್‍ಕಾರ್ಟ್, ಐಸಿಐಸಿಐ ಬ್ಯಾಂಕ್, ಎರೋಗ್ಲೋಬಲ್ ಟೆಕ್ನೋಲೊಜಿ, ಭಾರತ ಫೈನಾನ್ಸಿಯಲ್ ಇನ್‍ಕ್ಲೂಜನ್, ಎಸ್.ಬಿ.ಐ.ಲೈಫ್ ಇನ್ಸೂರನ್ಸ್, ಮಠ ಮಲ್ಟಿ ಮೈಂಡ, ಮೆಡ್‍ಪ್ಲಸ್, ರೇ-ನ್ಯೂಸ್, ಕೃಷಿ ಬಂಧು ಹಾಗೂ ಮೋತಿಲಾಲ ಓಸ್ವಾಲ್ ಕಂಪನಿಗಳು ಭಾಗವಹಿಸಲಿವೆ.
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ, ಡಿಪ್ಲೋಮಾ, ಡಿ-ಫಾರ್ಮಸಿ, ಬಿ-ಫಾರ್ಮಸಿ, ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಇಂಜಿನಿಯರಿಂಗ್(ಬಿ.ಇ.), ಎಂ.ಟೆಕ್., ಎಂ.ಬಿ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಎ.(ಕನ್ನಡ/ಪತ್ರಿಕೊದ್ಯಮ) ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಆಸಕ್ತಿಯುಳ್ಳ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು ತಮ್ಮ (ರೆಸ್ಯೂಮ್) ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ 08472-274846ಗೆ ಸಂಪರ್ಕಿಸಲು ಕೋರಲಾಗಿದೆ.